ADVERTISEMENT

ಗ್ರೀಸ್ ರೈಲು ಅಪಘಾತ: ಸಾವಿನ ಸಂಖ್ಯೆ 57 ಕ್ಕೆ ಏರಿಕೆ

ಐಎಎನ್ಎಸ್
Published 3 ಮಾರ್ಚ್ 2023, 3:03 IST
Last Updated 3 ಮಾರ್ಚ್ 2023, 3:03 IST
ಅಪಘಾತದ ದೃಶ್ಯ (ರಾಯಿಟರ್ಸ್‌ ಚಿತ್ರ)
ಅಪಘಾತದ ದೃಶ್ಯ (ರಾಯಿಟರ್ಸ್‌ ಚಿತ್ರ)   

ಅಥೆನ್ಸ್: ಮಧ್ಯ ಗ್ರೀಸ್‌ನಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ 48 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಆರು ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಇಲ್ಲಿನ ಪೊಲೀಸ್ ವಕ್ತಾರ ಕಾನ್ಸ್ಟಾಂಟಿಯಾ ಡಿಮೊಗ್ಲಿಡೌ ಗುರುವಾರ ಹೇಳಿದ್ದಾರೆ.

ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಶುಕ್ರವಾರ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಎಂದು ಅಗ್ನಿಶಾಮಕ ಅಧಿಕಾರಿ ಮಾಹಿತಿ ನೀಡಿದ್ದಾರೆ.

ADVERTISEMENT

ಅಥೆನ್ಸ್‌ನಿಂದ ಥೆಸ್ಸಾಲೊನಿಕಿ ನಗರಕ್ಕೆ ಹೊರಟ್ಟಿದ್ದ ರೈಲು ಹಾಗೂ ಸರಕು ಸಾಗಣೆ ರೈಲಿನ ನಡುವೆ ಡಿಕ್ಕಿ ಸಂಭವಿಸಿತ್ತು. ಡಿಕ್ಕಿ ರಭಸಕ್ಕೆ ಕೆಲ ಬೋಗಿಗಳು ಹಳಿತಪ್ಪಿದ್ದವು. ಮೂರು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿತ್ತು ಎಂದೂ ತಿಳಿಸಿದ್ದಾರೆ.

ಅಪಘಾತದ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ. ಸ್ಟೇಷನ್ ಮಾಸ್ಟರ್‌ ಒಬ್ಬರನ್ನು ಬಂಧಿಸಲಾಗಿದ್ದು, ಅಪಘಾತಕ್ಕೆ ಈತನ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.

ಸರ್ಕಾರವು ಶುಕ್ರವಾರದವರೆಗೆ ಮೂರು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮುಂದಿನ ದಿನಗಳಲ್ಲಿ ಇಂತಹ ದುರಂತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಇಲ್ಲಿನ ಸರ್ಕಾರ ಭರವಸೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.