ಪ್ರಾತಿನಿಧಿಕ ಚಿತ್ರ
ರೋಮ್: ಇಟಲಿಯ ಟಸ್ಕನಿ ವಲಯದ ಪೆಟ್ರೋಲ್ ಬಂಕ್‌ವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ರಕ್ಷಣಾ ಸಿಬ್ಬಂದಿಯು ಸ್ಫೋಟದ ಸ್ಥಳದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ಎರಡು ಮೃತದೇಹಗಳು ಮಂಗಳವಾರ ಪತ್ತೆಯಾಗಿವೆ. ಘಟನೆಯಲ್ಲಿ 14 ಮಂದಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಎಂದು ಟಸ್ಕನಿ ಗವರ್ನರ್ ಯುಗಿನಿಯೊ ಗಿಯಾನಿ ತಿಳಿಸಿದ್ದಾರೆ.
ಟಸ್ಕನಿಯ ಕಾಲೆಂಜಾನೊ ನಗರದಲ್ಲಿ ಇಎನ್‌ಐ ತೈಲ ಕಂಪನಿಯ ಪೆಟ್ರೋಲ್ ಬಂಕ್‌ನಲ್ಲಿ ಸೋಮವಾರ ಬೃಹತ್ ಪ್ರಮಾಣದ ಸ್ಫೋಟ ಸಂಭವಿಸಿತ್ತು. ಸ್ಫೋಟದ ತೀವ್ರತೆಗೆ ಬಂಕ್‌ನ ಪಕ್ಕದಲ್ಲಿದ್ದ ಕಟ್ಟಡವೂ ನೆಲಸಮಗೊಂಡಿದ್ದು, ಕಟ್ಟಡದ ಅವಶೇಷಗಳ ಅಡಿಯಲ್ಲಿ ವ್ಯಕ್ತಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಪೆಟ್ರೋಲ್ ಬಂಕ್ ಸ್ಫೋಟಗೊಳ್ಳಲು ಕಾರಣವೇನೆಂಬುದನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಇಎನ್‌ಐ ತೈಲ ಕಂಪನಿ ಪ್ರತಿಕ್ರಿಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.