ADVERTISEMENT

ಪಾಕಿಸ್ತಾನ: ದೋಣಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 48ಕ್ಕೆ ಏರಿಕೆ

ಪಿಟಿಐ
Published 31 ಜನವರಿ 2023, 11:18 IST
Last Updated 31 ಜನವರಿ 2023, 11:18 IST
.
.   

ಪೆಶಾವರ: ವಾಯುವ್ಯ ಪಾಕಿಸ್ತಾನದ ಸರೋವರದಲ್ಲಿ ಕಳೆದ ಭಾನುವಾರ ಸಂಭವಿಸಿದ ದೋಣಿ ದುರಂತದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 48ಕ್ಕೆ ಏರಿದೆ.

ದುರಂತ ಸಂಭವಿಸಿ ಮೂರು ದಿನಗಳ ನಂತರ ರಕ್ಷಣಾ ಸಿಬ್ಬಂದಿ ಮತ್ತೆ 18 ಶವಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮದರಸಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ದೋಣಿಯಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.