ADVERTISEMENT

ಬೀಜಿಂಗ್‌ನಲ್ಲಿ ಪ್ರವಾಹ: ಮೃತರ ಸಂಖ್ಯೆ 33ಕ್ಕೆ ಏರಿಕೆ

ಎಪಿ
Published 9 ಆಗಸ್ಟ್ 2023, 15:59 IST
Last Updated 9 ಆಗಸ್ಟ್ 2023, 15:59 IST
   

ಬೀಜಿಂಗ್‌: ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ದಾಖಲೆ ಪ್ರಮಾಣದ ಮಳೆ ಸುರಿಯುತ್ತಿದ್ದು, ಪ್ರವಾಹಕ್ಕೆ ಸಿಲುಕಿ ಮೃತರಾದವರ ಸಂಖ್ಯೆ 33ಕ್ಕೆ ಏರಿದೆ. ಇನ್ನೂ 18 ಜನ ಕಾಣೆಯಾಗಿದ್ದು, ಐವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ 59,000 ಮನೆಗಳು ಹಾನಿಯಾಗಿದ್ದು, 1,50,000ಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಅಂದಾಜು 15,000 ಹೆಕ್ಟೇರ್ ಕೃಷಿ ಭೂಮಿಯನ್ನು ಪ್ರವಾಹ ಆವರಿಸಿಕೊಂಡಿದೆ ಎಂದು ಸರ್ಕಾರ ತಿಳಿಸಿದೆ.

100ಕ್ಕೂ ಹೆಚ್ಚು ಸೇತುವೆಗಳು ಹಾನಿಯಾಗಿದ್ದು, ಸಂಚಾರ ವ್ಯತ್ಯಯವಾಗಿದೆ. ಈಗ ಆಗಿರುವ ಹಾನಿ ಸರಿಪಡಿಸಲು ಕನಿಷ್ಠ ಮೂರು ವರ್ಷ ಬೇಕಾಗಬಹುದು. ಪ್ರವಾಹ ಪೀಡಿತ ಸ್ಥಳಗಳಲ್ಲಿ ಜನರ ರಕ್ಷಣೆಗೆ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಬೀಜಿಂಗ್‌ನ ಉಪಮೇಯರ್‌ ಕ್ಸೈ ಲಿನ್‌ಮಾವೋ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.