ಅಬುಜಾ: ನೈಜೀರಿಯಾದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಂಬಂಧಿತ ಅವಘಡಗಳಲ್ಲಿ ಕನಿಷ್ಠ 151 ಜನರು ಮೃತಪಟ್ಟಿರುವುದು ಖಚಿತವಾಗಿದೆ ಎಂದು ಸ್ಥಳೀಯ ತುರ್ತು ಸೇವೆಗಳ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ನೈಗರ್ ರಾಜ್ಯದ ಮೊಕ್ವಾ ಪಟ್ಟಣದಲ್ಲಿ ಪ್ರವಾಹ ಉಂಟಾಗಿದ್ದು, ಈ ಪ್ರದೇಶದಲ್ಲಿ ವಾಸಿಸುತ್ತಿದ್ದ 3 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಶುಕ್ರವಾರ ಸುರಿದ ಮಳೆಯಿಂದಾಗಿ 500 ಜನರ ಮನೆಗಳಿಗೆ ಹಾನಿಯಾಗಿದೆ ಎಂದು ನೈಗರ್ ರಾಜ್ಯದ ತುರ್ತು ಏಜೆನ್ಸಿಯ ವಕ್ತಾರ ಇಬ್ರಾಹಿಂ ಹುಸ್ಸೇನಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.