ಭೂಕಂಪದಿಂದ ಬ್ಯಾಂಕಾಕ್‌ನಲ್ಲಿ ನೆಲಕ್ಕುರುಳಿದ ನಿರ್ಮಾಣ ಹಂತದ ಕಟ್ಟಡದ ಅವಶೇಷಗಳ ತೆರವು ಕಾರ್ಯಾಚರಣೆಯನ್ನು ಸೋಮವಾರ ಚಿತ್ರೀಕರಿಸುತ್ತಿರುವ ಜನರು
ಬ್ಯಾಂಕಾಕ್ : ಮ್ಯಾನ್ಮಾರ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 1700 ದಾಟಿದೆ. ಅವಶೇಷಗಳಡಿ ಸಿಲುಕಿದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಸೇನೆ ಸೋಮವಾರ ತಿಳಿಸಿದೆ.
ಈ ಕುರಿತು ಸರ್ಕಾರಿ ಸ್ವಾಮ್ಯದ ಎಂಆರ್‌ಟಿವಿ ವಾಹಿನಿಗೆ ಪ್ರತಿಕ್ರಿಯಿಸಿದ ಸರ್ಕಾರದ ವಕ್ತಾರ ಮೇಜರ್ ಜನರಲ್ ಜಾವ್ ಮಿನ್ ಟುನ್, ‘ಭೂಕಂಪದಲ್ಲಿ 34,00ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ’ ಎಂದು ಹೇಳಿದರು.
ಶುಕ್ರವಾರ ಸಂಭವಿಸಿದ ಭೂಕಂಪದಿಂದ 60 ಮಸೀದಿಗಳು ನೆಲಸಮವಾಗಿದ್ದು, ರಂಜಾನ್ ಪವಿತ್ರ ಮಾಸದ ಪ್ರಾರ್ಥನೆ ಸಲ್ಲಿಸುತ್ತಿದ್ದ 700 ಮಂದಿ ಮೃತಪಟ್ಟಿದ್ದಾರೆ ಎಂದು ಮ್ಯಾನ್ಮಾರ್ ಮುಸ್ಲಿಂ ನೆಟ್‌ವರ್ಕ್ ಸದಸ್ಯ ಟುನ್ ಕೀ ಹೇಳಿದ್ದಾರೆ.
ಈ ಅವಘಡದಲ್ಲಿ ಸಿಲುಕಿದ್ದವರ ಪೈಕಿ 70 ಮಂದಿಯನ್ನು ರಕ್ಷಿಸಲಾಗಿದೆ. ಆದರೆ, 50 ಮಂದಿ ಮೃತಪಟ್ಟಿದ್ದು, 150 ಮಂದಿಯ ಲೆಕ್ಕ ಈವರೆಗೆ ಸಿಕ್ಕಿಲ್ಲ ಎಂದು ರಕ್ಷಣಾ ಕಾರ್ಯಾಚರಣೆ ಕೈಗೊಂಡ ಸಿಬ್ಬಂದಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.