ADVERTISEMENT

ಅಮೆರಿಕದಲ್ಲಿ ಡೆಲ್ಟಾ ಪ್ರಸರಣ ತೀವ್ರ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಏರಿಕೆ

ರಾಯಿಟರ್ಸ್
Published 10 ಆಗಸ್ಟ್ 2021, 2:41 IST
Last Updated 10 ಆಗಸ್ಟ್ 2021, 2:41 IST
ಸಾಂದರ್ಭಿಕ ಚಿತ್ರ (ಎಎಫ್‌ಪಿ)
ಸಾಂದರ್ಭಿಕ ಚಿತ್ರ (ಎಎಫ್‌ಪಿ)   

ವಾಷಿಂಗ್ಟನ್: ಕೊರೊನಾ ವೈರಸ್ ಡೆಲ್ಟಾ ರೂಪಾಂತರದಿಂದಾಗಿ ಅಮೆರಿಕದಲ್ಲಿ ಸೋಂಕಿಗೀಡಾಗುತ್ತಿರುವವರ ಮತ್ತು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ 6 ತಿಂಗಳ ಗರಿಷ್ಠ ಮಟ್ಟ ತಲುಪಿದೆ.

ಕಳೆದ ಮೂರು ದಿನಗಳಿಂದ ಅಮೆರಿಕದಲ್ಲಿ ಸರಾಸರಿ ಒಂದು ಲಕ್ಷ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಇದರೊಂದಿಗೆ ಹೊಸ ಪ್ರಕರಣಗಳ ಪ್ರಮಾಣದಲ್ಲಿ ಶೇ 35ರಷ್ಟು ಏರಿಕೆಯಾಗಿದೆ. ಫ್ಲೋರಿಡಾ, ಲೂಯಿಸಿಯಾನ, ಅರ್ಕಾನ್ಸಾಸ್‌ಗಳಲ್ಲಿ ಅತಿಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ.

ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವೂ ಶೇ 40ರಷ್ಟು ಹೆಚ್ಚಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ಇದು ಶೇ 18ರಷ್ಟು ಹೆಚ್ಚಾಗಿದೆ.

ADVERTISEMENT

ಫ್ಲೋರಿಡಾದಲ್ಲಿ ಒಂದೇ ದಿನ 28,317 ಪ್ರಕರಣಗಳು ವರದಿಯಾಗಿವೆ. ಫ್ಲೋರಿಡಾದಲ್ಲಿ ಆಸ್ಪತ್ರೆಗೆ ದಾಖಲಾಗುವ ಕೋವಿಡ್ ಸೋಂಕಿತರ ಸಂಖ್ಯೆಯೂ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ ಎಂದು ಅಮೆರಿಕ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರ (ಸಿಡಿಸಿ) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.