ADVERTISEMENT

ಡೆನ್ವರ್ ಉಪನಗರದಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಮೂವರ ಸಾವು

ಏಜೆನ್ಸೀಸ್
Published 22 ಜೂನ್ 2021, 5:49 IST
Last Updated 22 ಜೂನ್ 2021, 5:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅರ್ವಾಡಾ (ಅಮೆರಿಕ): ‘ಇಲ್ಲಿನ ಡೆನ್ವರ್‌ ಉಪನಗರದಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಅಧಿಕಾರಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಬಳಿಕ ಅಪರಿ‌ಚಿತನನ್ನು ಪೊಲೀಸರು ಗುಂಡಿಕ್ಕಿ ಕೊಂದರು’ ಎಂದು ಅಧಿಕಾರಿಗಳು ತಿಳಿಸಿದರು.

‘ಅರ್ವಾಡಾ ನಗರದ ಗ್ರಂಥಾಲಯದ ಬಳಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿದೆ ಎಂಬುದಾಗಿ ಸೋಮವಾರ ಮಧ್ಯಾಹ್ನ 1.15ಕ್ಕೆ ಕರೆ ಬಂದಿತ್ತು. ಅಲ್ಲಿ ಗುಂಡಿನ ದಾಳಿ ನಡೆದಿದ್ದು, ಅಧಿಕಾರಿಯೊಬ್ಬರಿಗೆ ಗುಂಡು ತಗುಲಿದೆ ಎಂಬ ಮಾಹಿತಿ ಬಂದಿದೆ’ ಎಂದು ಉಪ ಮುಖ್ಯಸ್ಥ ಎಡ್ ಬ್ರಾಡಿ ಹೇಳಿದರು.

‘ಈ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ವ್ಯಕ್ತಿಯೂ ಗಾಯಗೊಂಡಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆ ಉಸಿರೆಳೆದರು. ಬಂದೂಕುಧಾರಿಯನ್ನು ಪೊಲೀಸರು ಹೊಡೆದುರುಳಿಸಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ADVERTISEMENT

‘ಅರ್ವಾಡಾ ಅಧಿಕಾರಿ ಸೇರಿದಂತೆ ಈ ರೀತಿ ಪೊಲೀಸ್‌ ಇಲಾಖೆಯಲ್ಲಿ ಮೂವರು ಅಧಿಕಾರಿಗಳು ಮೃತಪಟ್ಟಿದ್ದಾರೆ. ಇದು ನಮ್ಮ ಪೊಲೀಸ್‌ ಇಲಾಖೆಗೆ ಬೇಸರದ ದಿನ’ ಎಂದು ಅರ್ವಾಡಾದ ಮೇಯರ್‌ ಮಾರ್ಕ್‌ ವಿಲಿಯಂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.