ADVERTISEMENT

ದೀಪಾವಳಿ ಹಬ್ಬದ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಪಿಟಿಐ
Published 21 ಅಕ್ಟೋಬರ್ 2025, 2:18 IST
Last Updated 21 ಅಕ್ಟೋಬರ್ 2025, 2:18 IST
<div class="paragraphs"><p>ಡೊನಾಲ್ಡ್ ಟ್ರಂಪ್</p></div>

ಡೊನಾಲ್ಡ್ ಟ್ರಂಪ್

   

ನ್ಯೂಯಾರ್ಕ್: ವಿಶ್ವದಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

‘ಇಂದು ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸುವ ಪ್ರತಿಯೊಬ್ಬ ಅಮೆರಿಕನ್ನರಿಗೂ ನನ್ನ ಶುಭಾಶಯಗಳು. ಕುಟುಂಬಸ್ಥರು ಮತ್ತು ಸ್ನೇಹಿತರನ್ನು ಒಟ್ಟಿಗೆ ಸೇರಿಸುವ ಸಮಯ ಇದು’ ಎಂದು ಟ್ರಂಪ್ ಹೇಳಿದ್ದಾರೆ.

ADVERTISEMENT

‘ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ದೀಪಾವಳಿ ಹಬ್ಬವು ಹಲವು ಅಮೆರಿಕನ್ನರಿಗೆ ವಿಜಯದ ಸಂಕೇತವಾಗಿದೆ. ಭರವಸೆಯಿಂದ ಶಕ್ತಿಯನ್ನು ಪಡೆಯುವ ಮೂಲಕ ಎಲ್ಲರೂ ಒಟ್ಟಿಗೆ ಸೇರುವ ಸಮಯ ಇದಾಗಿದೆ’ ಎಂದು ಅವರು ನುಡಿದಿದ್ದಾರೆ.

‘ನಾವು ದೀಪಗಳನ್ನು ಬೆಳಗಿಸುವಾಗ ಒಳ್ಳೆಯದು ಯಾವಾಗಲೂ ಕೆಟ್ಟದ್ದರ ವಿರುದ್ಧ ಜಯಗಳಿಸುತ್ತದೆ ಎಂಬ ನಂಬಿಕೆ ಇಟ್ಟುಕೊಂಡಿರುತ್ತೇವೆ. ದೀಪಾವಳಿಯನ್ನು ಆಚರಿಸುವ ಪ್ರತಿಯೊಬ್ಬ ಅಮೆರಿಕನ್ನರಿಗೂ ಪ್ರಶಾಂತತೆ, ಸಮೃದ್ಧಿ, ಭರವಸೆ ಮತ್ತು ಶಾಂತಿ ದೊರಕಲಿ’ ಎಂದು ಟ್ರಂಪ್ ಹಾರೈಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.