ಎಲಾನ್ ಮಸ್ಕ್ ಹಾಗೂ ಡೊನಾಲ್ಡ್ ಟ್ರಂಪ್
ರಾಯಿಟರ್ಸ್ ಚಿತ್ರ
ವಾಷಿಂಗ್ಟನ್: ಸರ್ಕಾರಿ ಉದ್ಯೋಗಿಗಳು ವಾರದ ಅವಧಿಯಲ್ಲಿ ಏನೆಲ್ಲ ಕೆಲಸ ಮಾಡಿದ್ದಾರೆ ಎಂಬುದನ್ನು ವಿವರಿಸಬೇಕು. ಇಲ್ಲವಾದರೆ, ಅಂತಹವರಿಂದ ರಾಜೀನಾಮೆ ಪಡೆಯಲಾಗುವುದು ಎಂದು ಉದ್ಯಮಿ ಹಾಗೂ ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆಯ (ಡಿಒಜಿಇ) ಉಸ್ತುವಾರಿ ಎಲಾನ್ ಮಸ್ಕ್ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸರ್ಕಾರಿ ನೌಕರರು ಕಳೆದ ಒಂದು ವಾರದಲ್ಲಿ ಏನೆಲ್ಲ ಕೆಲಸ ಮಾಡಿದ್ದಾರೆ ಎಂಬುದನ್ನು ವಿವರಿಸಬೇಕು. ಆ ನಿಟ್ಟಿನಲ್ಲಿ ಶೀಘ್ರದಲ್ಲೇ ಅವರಿಗೆಲ್ಲ ಇ–ಮೇಲ್ ಕಳುಹಿಸಲಾಗುವುದು. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮುಂದುವರಿದು, ಒಂದು ವೇಳೆ ಇ–ಮೇಲ್‌ಗೆ ಪ್ರತಿಕ್ರಿಯೆ ನೀಡದಿದ್ದರೆ ಅದನ್ನು ರಾಜೀನಾಮೆ ಎಂದು ಪರಿಗಣಿಸಲಾಗುವುದು ಎಂದೂ ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.