ಡೊನಾಲ್ಡ್ ಟ್ರಂಪ್
ಟೆಲ್ ಅವೀವ್: ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಯುದ್ಧಕ್ಕೆ ಕದನ ವಿರಾಮ ಘೋಷಿಸುವ ಸಂಬಂಧ ಮಾತುಕತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಒತ್ತಾಯಿಸಿದ್ದಾರೆ.
‘ಗಾಜಾದಲ್ಲಿ ಕದನ ವಿರಾಮ ಒಪ್ಪಂದ ಏರ್ಪಡಲಿ. ಒತ್ತೆಯಾಳುಗಳು ವಾಪಸಾಗಲಿ’ ಎಂದು ಅವರು ಸಾಮಾಜಿಕ ಮಾಧ್ಯಮದ ಮೂಲಕ ಹೇಳಿದ್ದಾರೆ.
ಕೆಲವು ಪ್ಯಾಲೆಸ್ಟೀನಿಯನ್ನರು ಶಾಂತಿ ಮಾತುಕತೆ ಸಾಧ್ಯತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ಉತ್ತರ ಗಾಜಾದ ಕೆಲವು ಪ್ರದೇಶಗಳಲ್ಲಿ ಸಾಮೂಹಿಕ ಸ್ಥಳಾಂತರಕ್ಕೆ ಇಸ್ರೇಲ್ ಆದೇಶಿಸಿದೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಉನ್ನತ ಸಲಹೆಗಾರ ರಾನ್ ಡರ್ಮರ್ ಅವರು ಕದನ ವಿರಾಮ ಮಾತುಕತೆಗಾಗಿ ಈ ವಾರ ವಾಷಿಂಗ್ಟನ್‌ಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.