ಡೊನಾಲ್ಡ್ ಟ್ರಂಪ್, ಕಿಯರ್ ಸ್ಟಾರ್ಮರ್
ಲಂಡನ್: ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧವನ್ನು ಕೊನೆಗೊಳಿಸಿದ್ದೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ಬ್ರಿಟನ್ ಪ್ರವಾಸದಲ್ಲಿರುವ ಟ್ರಂಪ್ ಅವರು ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಅವರ ಎದುರಲ್ಲೇ ಈ ಕುರಿತು ಹೇಳಿಕೆ ನೀಡಿದ್ದಾರೆ.
ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಟ್ರಂಪ್ ಈ ಕುರಿತು ಪ್ರಸ್ತಾಪಿಸಿದ್ದಾರೆ.
'ನಾವು ಏಳು ಯುದ್ಧಗಳನ್ನು ಕೊನೆಗೊಳಿಸಿದ್ದೇವೆ. ಬಹುತೇಕ ಸಂಘರ್ಷಗಳನ್ನು ಇತ್ಯರ್ಥಗೊಳಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ನಾವು ಎರಡು ಅಣ್ವಸ್ತ್ರ ಸಾಮರ್ಥ್ಯದ ರಾಷ್ಟ್ರಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧಗಳನ್ನು ಕೊನೆಗೊಳಿಸಿದ್ದೇನೆ' ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ವ್ಯಾಪಾರ ಪ್ರಸ್ತಾಪವನ್ನು ಮುಂದಿಟ್ಟುಕೊಂಡು ಯುದ್ಧವನ್ನು ನಿಲ್ಲಿಸಿರುವುದಾಗಿ ಟ್ರಂಪ್ ಹೇಳಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧವನ್ನು ಕೊನೆಗೊಳಿಸಿರುವುದಾಗಿ ಟ್ರಂಪ್ ಪದೇ ಪದೇ ಹೇಳಿಕೆ ನೀಡುತ್ತಲೇ ಬಂದಿದ್ದರು. ಆದರೆ ಭಾರತ-ಪಾಕ್ ವಿಷಯದಲ್ಲಿ ಮೂರನೇ ರಾಷ್ಟ್ರದ ಮಧ್ಯ ಪ್ರವೇಶವನ್ನು ಭಾರತ ನಿರಾಕರಿಸುತ್ತಲೇ ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.