ADVERTISEMENT

ಭಾರತ-ಪಾಕ್ ಯುದ್ಧ ನಿಲ್ಲಿಸಿರುವುದಾಗಿ ಟ್ರಂಪ್ 1ವರ್ಷದ ಸಾಧನೆ ಪಟ್ಟಿಯಲ್ಲಿ ಉಲ್ಲೇಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜನವರಿ 2026, 5:22 IST
Last Updated 21 ಜನವರಿ 2026, 5:22 IST
<div class="paragraphs"><p>ಡೊನಾಲ್ಡ್ ಟ್ರಂಪ್</p></div>

ಡೊನಾಲ್ಡ್ ಟ್ರಂಪ್

   

(ಪಿಟಿಐ ಚಿತ್ರ)

ವಾಷಿಂಗ್ಟನ್: ಭಾರತ ಹಾಗೂ ಪಾಕಿಸ್ತಾನದ ನಡುವಣ ಯುದ್ಧವನ್ನು ನಿಲ್ಲಿಸಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.

ADVERTISEMENT

ಅಮೆರಿಕದ ಅಧ್ಯಕ್ಷರಾಗಿ ಎರಡನೇ ಅವಧಿಗೆ ಆಯ್ಕೆಯಾಗಿರುವ ಟ್ರಂಪ್ ಒಂದು ವರ್ಷ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ತಮ್ಮ ಸರ್ಕಾರದ ಸಾಧನೆಯ ಪಟ್ಟಿಯಲ್ಲೂ ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧವನ್ನು ನಿಲ್ಲಿಸಿರುವುದಾಗಿ ಪಟ್ಟಿ ಮಾಡಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಘರ್ಷದ ಸಮಯದಲ್ಲಿ ಎಂಟು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು ಎಂದೂ ಟ್ರಂಪ್ ಹೇಳಿದ್ದಾರೆ.

'10 ತಿಂಗಳಲ್ಲೇ ನಾನು ಎಂಟು ಯುದ್ಧಗಳನ್ನು ನಿಲ್ಲಿಸಿದ್ದೇನೆ. ಬೇರೆ ಯಾರಿಂದಲೂ ಸಾಧ್ಯವಿರಲಿಲ್ಲ. ಪರಮಾಣು ಸಾಮರ್ಥ್ಯದ ಭಾರತ-ಪಾಕಿಸ್ತಾನ ಯುದ್ಧದಲ್ಲಿ ನಿರತವಾಗಿದ್ದವು. ಹಾಗಾಗಿ ನನ್ನ ಪಾಲಿಗಿದು ದೊಡ್ಡ ವಿಷಯ' ಎಂದಿದ್ದಾರೆ.

ಕಳೆದ ವರ್ಷ ವಾಷಿಂಗ್ಟನ್‌ಗೆ ಭೇಟಿ ನೀಡಿದ ಪಾಕಿಸ್ತಾನದ ಪ್ರಧಾನಿ ಇದನ್ನೇ ಹೇಳಿದ್ದರು ಎಂದು ಉಲ್ಲೇಖಿಸಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧವನ್ನು ನಿಲ್ಲಿಸಿರುವುದಾಗಿ ಟ್ರಂಪ್ ಸುಮಾರು 70ಕ್ಕೂ ಅಧಿಕ ಸಲ ಹೇಳಿಕೊಂಡಿದ್ದಾರೆ. ಆದರೆ ಮೂರನೇ ದೇಶದ ಮಧ್ಯಸ್ಥಿಕೆಯನ್ನು ಭಾರತ ನಿರಾಕರಿಸುತ್ತಲೇ ಬಂದಿದೆ.

ನೊಬೆಲ್ ಶಾಂತಿ ಪ್ರಶಸ್ತಿ ಸಿಗಬೇಕಿತ್ತು: ಟ್ರಂಪ್

ಶ್ವೇತಭವನದಲ್ಲಿ ಸುಮಾರು ಎರಡು ತಾಸುಗಳಷ್ಟು ಮುಂದುವರಿದ ಟ್ರಂಪ್ ಸುದ್ದಿಗೋಷ್ಠಿಯಲ್ಲಿ ತಮಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗಬೇಕಿತ್ತು ಎಂದು ಟ್ರಂಪ್ ಹೇಳಿದ್ದಾರೆ.

ನೊಬೆಲ್ ಶಾಂತಿ ಪ್ರಶಸ್ತಿಗೆ ತಮ್ಮ ಹೆಸರನ್ನು ಪರಿಗಣಿಸದೇ ಇರುವುದಕ್ಕೆ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದರು. ಭಾರತ-ಪಾಕಿಸ್ತಾನ ಸಂಘರ್ಷವನ್ನು ಕೊನೆಗೊಳಿಸುವ ಮೂಲಕ ಕನಿಷ್ಠ ಒಂದು ಕೋಟಿ ಜನರ ಪ್ರಾಣವನ್ನು ಉಳಿಸಿದ್ದೇನೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.