ಡೊನಾಲ್ಡ್ ಟ್ರಂಪ್
– ರಾಯಿಟರ್ಸ್
ನ್ಯೂಯಾರ್ಕ್/ವಾಷಿಂಗ್ಟನ್: ‘ಭಾರತ–ಪಾಕ್ ನಡುವೆ ಅಣ್ವಸ್ತ್ರ ಯುದ್ಧ ನಡೆಯುವ ಸಾಧ್ಯತೆ ಇದ್ದು, ಅದನ್ನು ನಾನೇ ತಪ್ಪಿಸಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ಒವಲ್ ಕಚೇರಿಯಲ್ಲಿ ಮಾತನಾಡಿದ ಅವರು, ‘ನೀವು ಭಾರತ ಹಾಗೂ ಪಾಕಿಸ್ತಾನವನ್ನು ಒಮ್ಮೆ ಗಮನಿಸಿ. ವಿಮಾನಗಳನ್ನು ಗಾಳಿಯಲ್ಲಿ ಹೊಡೆದುರುಳಿಸಲಾಯಿತು. ಆರರಿಂದ ಏಳು ವಿಮಾನಗಳು ಕೆಳಕ್ಕುರುಳಿದವು. ಅವರು ಅಣ್ವಸ್ತ್ರ ಯುದ್ಧಕ್ಕೂ ಮುಂದಾಗಿದ್ದರು, ನಾವು ಸಮಸ್ಯೆಯನ್ನು ಬಗೆಹರಿಸಿದೆವು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.