ವಾಷಿಂಗ್ಟನ್: ವಿಶ್ವದಾದ್ಯಂತ ಯುದ್ಧ ನಿಲ್ಲಿಸುವ ಕುರಿತು ಶಾಂತಿ ಪ್ರಚಾರ ಮಾಡುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇದೀಗ ತಮ್ಮ ದೇಶದ ರಕ್ಷಣಾ ಇಲಾಖೆಯ ಹೆಸರನ್ನೇ ‘ಯುದ್ಧ ಇಲಾಖೆ’ಯನ್ನಾಗಿ ಮರುನಾಮಕರಣ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
‘ಅಮೆರಿಕವು ವಿಶ್ವದ ಶಕ್ತಿಶಾಲಿ ರಾಷ್ಟ್ರ ಎಂಬ ಸಂದೇಶ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಗೆಲುವು ಮತ್ತು ಪ್ರಬಲ ಸಾಮರ್ಥ್ಯದ ಸಂದೇಶವನ್ನು ನೀಡುತ್ತದೆ ಎಂದು ಭಾವಿಸಿದ್ದೇನೆ’ ಎಂದು ಟ್ರಂಪ್ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ (ಅಮೆರಿಕ ಸಂಸತ್ತು) ಸಂಸದರು ಮರುನಾಮಕರಣಕ್ಕೆ ಔಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಮರುನಾಮಕರಣ ಆದೇಶದ ಬಳಿಕ ರಕ್ಷಣಾ ಇಲಾಖೆಯ ಕಚೇರಿಯ ಆವರಣದಲ್ಲಿನ ಫಲಕ ಹಾಗೂ ವೆಬ್‌ಸೈಟ್ ಸೇರಿದಂತೆ ಎಲ್ಲಾ ಕಡೆ ಹೆಸರು ಬದಲಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.