ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ರಾಯಿಟರ್ಸ್ ಚಿತ್ರ
ವಾಷಿಂಗ್ಟನ್: ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮುಂದಿನ ದಿನಗಳಲ್ಲಿ ಮುಖಾಮುಖಿ ಭೇಟಿಯಾಗಲಿದ್ದಾರೆ ಎಂದು ರಷ್ಯಾದ ಅಧ್ಯಕ್ಷರ ಕಚೇರಿ (ಕ್ರೆಮ್ಲಿನ್) ತಿಳಿಸಿದೆ.
ರಷ್ಯಾವು ನಡೆಸುತ್ತಿರುವ ದಾಳಿಯನ್ನು ಕೊನೆಗೊಳಿಸಿ, ಶಾಂತಿ ಸ್ಥಾಪನೆಯಾಗಬೇಕು ಎಂದು ಉಕ್ರೇನ್‌ನ ನಿವಾಸಿಗಳು ತೀವ್ರ ಒತ್ತಡ ಹೇರುತ್ತಿರುವುದು ಹೊಸ ‘ಗ್ಯಾಲಪ್ ಸಮೀಕ್ಷೆ’ಯಲ್ಲಿ ಕಂಡುಬಂದಿತ್ತು. ಈ ಕಾರಣದಿಂದ ಎರಡೂ ದೇಶಗಳ ಅಧ್ಯಕ್ಷರ ಭೇಟಿಗೆ ಕಾಲ ಕೂಡಿಬಂದಿದೆ.
‘ಸಭೆ ನಿಗದಿಪಡಿಸುವ ಕುರಿತು ಎರಡೂ ಕಡೆಗಳಲ್ಲಿ ಸಮಾಲೋಚನೆಗಳು ನಡೆಯುತ್ತಿದ್ದು, ಸ್ಥಳ ನಿಗದಿಪಡಿಸಲು ಒಪ್ಪಿಗೆ ಸಿಕ್ಕಿದೆ. ಸದ್ಯದಲ್ಲೇ ಸ್ಥಳ ಪ್ರಕಟಿಸಲಾಗುತ್ತದೆ’ ಎಂದು ಪುಟಿನ್ ಅವರ ವಿದೇಶಾಂಗ ಸಲಹೆಗಾರ ಯುರಿ ಉಶಕೋವ್ ತಿಳಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರು ಎರಡನೇ ಬಾರಿ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪುಟಿನ್ ಜೊತೆ ಮೊದಲ ಮುಖಾಮುಖಿ ಭೇಟಿ ಇದಾಗಿರಲಿದೆ. ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ರಷ್ಯಾ– ಉಕ್ರೇನ್ ನಡುವಿನ ಯುದ್ಧ ಕೊನೆಯಾಗಲು ಈ ಸಭೆಯು ಮಹತ್ತರ ಹೆಜ್ಜೆಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಇದರ ಹೊರತಾಗಿಯೂ ರಷ್ಯಾ ವಿರುದ್ಧ ಹೋರಾಡುತ್ತಿರುವ ಉಕ್ರೇನ್‌ಗೆ ಅಮೆರಿಕವು ತನ್ನ ಬೆಂಬಲ ಮುಂದುವರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.