ADVERTISEMENT

ಕಠಿಣ ವಾರ ಮುಂದಿದೆ, ಇನ್ನಷ್ಟು ಸಾವು ಸಂಭವಿಸಬಹುದು: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಏಜೆನ್ಸೀಸ್
Published 5 ಏಪ್ರಿಲ್ 2020, 4:25 IST
Last Updated 5 ಏಪ್ರಿಲ್ 2020, 4:25 IST
ಡೊನಾಲ್ಡ್ ಟ್ರಂಪ್ -ಎಪಿ ಚಿತ್ರ
ಡೊನಾಲ್ಡ್ ಟ್ರಂಪ್ -ಎಪಿ ಚಿತ್ರ   

ವಾಷಿಂಗ್ಟನ್: ಕೊರೊನಾ ವೈರಸ್ ಬಿಕ್ಕಟ್ಟಿನ ‘ಕಠಿಣ ವಾರ’ ಅಮೆರಿಕದ ಮುಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಾವು–ನೋವು ಸಂಭವಿಸುವ ಸಾಧ್ಯತೆ ಇದೆ ಎಂದು ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಕೊರೊನಾ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳನ್ನು ಪೂರೈಸಲು ಬದ್ಧನಾಗಿದ್ದೇನೆ ಎಂದೂ ಅವರು ಹೇಳಿದ್ದಾರೆ.

ಪರಿಸ್ಥಿತಿಯನ್ನು ನಿಭಾಯಿಸಲು ಸಾವಿರದಷ್ಟು ಸೆನಾ ಸಿಬ್ಬಂದಿ, ಶುಶ್ರೂಷಕಿಯರು, ವೈದ್ಯರು ಹಾಗೂ ಇತರ ಸಹಾಯಕರು ನ್ಯೂಯಾರ್ಕ್‌ಗೆ ತೆರಳಲಿದ್ದಾರೆ. ನೆರವಿಗಾಗಿ ಅಮೆರಿಕದ ಇತೆರೆಡಗಳಿಗೂ ಸಾವಿರಾರು ಸೇನಾ ಸಿಬ್ಬಂದಿಯನ್ನು ಕಳುಹಿಸಕೊಡಲಾಗುವುದು ಎಂದು ಅವರು ಘೋಷಿಸಿದ್ದಾರೆ.

‘ಅವರು ಯುದ್ಧಕ್ಕೆ ತೆರಳುತ್ತಿದ್ದಾರೆ. ನಿಜವಾಗಿಯೂ ಈವರೆಗೆ ತರಬೇತಿ ಪಡೆಯದಂಥ ಸಮರಕ್ಕೆ ಅವರು ಹೋಗುತ್ತಿದ್ದಾರೆ’ ಎಂದು ಟ್ರಂಪ್ ಹೇಳಿದ್ದಾರೆ.

ADVERTISEMENT

ಕೊರೊನಾ ವೈರಸ್‌ ಸೋಂಕಿನಿಂದಾಗಿ ಅಮೆರಿಕದಲ್ಲಿ ಈಗಾಗಲೇ 8,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 3 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಈ ಮಧ್ಯೆ, ಇನ್ನೂ 1ರಿಂದ 2.40 ಲಕ್ಷ ಮಂದಿ ಸೋಂಕಿಗೆ ತುತ್ತಾಗುವ ಸಾಧ್ಯತೆ ಇದೆ ಎಂದು ಸರ್ಕಾರ ಮುನ್ನೆಚ್ಚರಿಕೆ ನೀಡಿದೆ. ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದರೆ ಈ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದೂ ಸರ್ಕಾರ ಎಚ್ಚರಿಕೆ ನೀಡಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.