ADVERTISEMENT

ಕೊರೊನಾ ಪರೀಕ್ಷೆ | ರಾಜ್ಯಗಳಿಗೆ ₹8.34 ಲಕ್ಷ ಕೋಟಿ ಪರಿಹಾರ ಧನ: ಶ್ವೇತಭವನ

ಏಜೆನ್ಸೀಸ್
Published 12 ಮೇ 2020, 4:35 IST
Last Updated 12 ಮೇ 2020, 4:35 IST
ಡೊನಾಲ್ಡ್‌ ಟ್ರಂಪ್
ಡೊನಾಲ್ಡ್‌ ಟ್ರಂಪ್   

ವಾಷಿಂಗ್ಟನ್‌: ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಮಾರಣಾಂತಿಕ ಕೋವಿಡ್‌-19ನಿಯಂತ್ರಣಕ್ಕೆ ಪಣತೊಟ್ಟಿರುವ ಡೊನಾಲ್ಡ್‌ ಟ್ರಂಪ್‌ ಸರ್ಕಾರ, ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಲು ಮುಂದಾಗಿದೆ.

ಈನಿಟ್ಟಿನಲ್ಲಿ ರಾಜ್ಯಗಳಿಗೆ 11ಬಿಲಿಯನ್‌ ಡಾಲರ್‌ (₹8.34 ಲಕ್ಷ ಕೋಟಿ) ಪರಿಹಾರ ಧನ ನೀಡುವುದಾಗಿ ಶ್ವೇತಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ವಾರ ಸೇನಾ ಸಹಾಯಕರೊಬ್ಬರಿಗೆ ಕೊರೊನಾ ಸೋಂಕು ತಗುಲಿದ್ದರಿಂದ ಪ್ರತಿ ದಿನ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧರಿಸಿದ್ದರು.ಉಪಾಧ್ಯಕ್ಷರೂ ಸೇರಿ ಶ್ವೇತ ಭವನದ ಎಲ್ಲರೂ ಪ್ರತಿ ದಿನ ಕೊರೊನಾ ಪರೀಕ್ಷೆಗೆ ಒಳಗಾಗುವುದಾಗಿಯೂ ಅವರು ತಿಳಿಸಿದ್ದರು.

ADVERTISEMENT

ಕೊರೊನಾ ವೈರಸ್ ಸೋಂಕು ಅಮೆರಿಕದಲ್ಲಿ ಅತಿ ಹೆಚ್ಚು ಸಾವು–ನೋವಿಗೆ ಕಾರಣವಾಗಿದ್ದು, ಈವರೆಗೆ 13,85,834 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 81,795 ಜನ ಮೃತಪಟ್ಟಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.