ADVERTISEMENT

ಅಮೆರಿಕ: ಅಕ್ರಮ ವಲಸಿಗರ ಗಡೀಪಾರು ಕಾರ್ಯಾಚರಣೆ ಶುರು; ನೂರಾರು ವಲಸಿಗರ ಸೆರೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2025, 16:01 IST
Last Updated 24 ಜನವರಿ 2025, 16:01 IST
ಡೊನಾಲ್ಡ್‌ ಟ್ರಂಪ್
ಡೊನಾಲ್ಡ್‌ ಟ್ರಂಪ್   

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿರುವಂತೆ, ಅಕ್ರಮ ವಲಸಿಗರನ್ನು ಅಮೆರಿಕದಿಂದ ಗಡೀಪಾರು ಮಾಡುವ ಕಾರ್ಯಾಚರಣೆಗೆ  ಚಾಲನೆ ನೀಡಲಾಗಿದೆ. ಇನ್ನೊಂದೆಡೆ, ನೂರಾರು ವಲಸಿಗರನ್ನು ಬಂಧಿಸಲಾಗಿದೆ.

ಅಕ್ರಮ ವಲಸಿಗರನ್ನು ಸೇನೆಯ ವಿಮಾನಗಳ ಮೂಲಕ ದೇಶದಿಂದ ಹೊರಗೆ ಕಳುಹಿಸಲಾಗುತ್ತಿದೆ ಎಂದು ಶ್ವೇತಭವನ ತಿಳಿಸಿದೆ.

‘ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ 538 ಅಕ್ರಮ ವಲಸಿಗರನ್ನು ಅಧಿಕಾರಿಗಳು ಬಂಧಿಸಿದ್ದು, ನೂರಾರು ಮಂದಿಯನ್ನು ದೇಶದಿಂದ ಹೊರ ಹಾಕಲಾಗಿದೆ’ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕೆರೊಲಿನ್ ಲೆವಿಟ್‌ ತಿಳಿಸಿದ್ದಾರೆ.

ADVERTISEMENT

‘ಅಮೆರಿಕದ ಇತಿಹಾಸದಲ್ಲಿಯೇ, ಅಕ್ರಮ ವಲಸಿಗರನ್ನು ಗಡೀಪಾರು ಮಾಡುವ ಭಾರಿ ಪ್ರಮಾಣದ ಕಾರ್ಯಾಚರಣೆ ಯಾವುದೇ ಅಡೆತಡೆಯಿಲ್ಲದೆ ನಡೆಯುತ್ತಿದೆ’ ಎಂದು ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಅಮೆರಿಕದಲ್ಲಿ 1.1 ಕೋಟಿ ದಾಖಲೆರಹಿತ ವಲಸಿಗರು ನೆಲಸಿದ್ದಾರೆ ಎಂದು ಅಂದಾಜಿಸಲಾಗಿದೆ. 

ಇನ್ನೊಂದೆಡೆ, ‘ಬೇರೆ ದೇಶದಲ್ಲಿ ಆಶ್ರಯ ಕೋರುವುದು ಸಾರ್ವತ್ರಿಕವಾಗಿ ಒಪ್ಪಿಕೊಂಡಿರುವ ಮಾನವ ಹಕ್ಕು ಎಂಬುದನ್ನು ಎಲ್ಲ ರಾಷ್ಟ್ರಗಳು ನೆನಪಿನಲ್ಲಿಟ್ಟುಕೊಳ್ಳಬೇಕು’ ಎಂದು ವಿಶ್ವಸಂಸ್ಥೆಯ ಹಕ್ಕುಗಳ ವಿಭಾಗದ ವಕ್ತಾರೆ ರವೀನಾ ಶಾಮದಾಸಾನಿ ಅವರು ಜಿನೀವಾದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.