ADVERTISEMENT

ಚೀನಾದಲ್ಲಿ ಭೂಕುಸಿತ: ಎಂಟು ಮಂದಿ ಸಾವು

ಏಜೆನ್ಸೀಸ್
Published 22 ಜನವರಿ 2024, 14:27 IST
Last Updated 22 ಜನವರಿ 2024, 14:27 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೀಜಿಂಗ್‌: ನೈರುತ್ಯ ಚೀನಾದ ಯುನಾನ್‌ ಪ್ರಾಂತ್ಯದ ಝೆನ್‌ಕ್ಸಿಯಾಂಗ್‌ ಕೌಂಟಿಯಲ್ಲಿ ಸೋಮವಾರ ಮುಂಜಾನೆ ಭೂಕುಸಿತ ಸಂಭವಿಸಿ ಎಂಟು ಮಂದಿ ಮೃತಪಟ್ಟಿದ್ದು, ಹಲವು ಮಂದಿ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.

ಭೂಕುಸಿತದ ಪರಿಣಾಮವಾಗಿ 18 ಮನೆಗಳು ಮಣ್ಣಿನಡಿಯಲ್ಲಿ ಹೂತುಹೋಗಿವೆ. 200 ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ವಿಪತ್ತು ನಿರ್ವಹಣಾ ಪಡೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಅವಶೇಷಗಳ ಅಡಿಯಿಂದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿಲ್ಲ ಎಂದಿದ್ದಾರೆ.

ರಕ್ಷಣಾ ಕಾರ್ಯಾಚರಣೆಯ ದೃಶ್ಯಗಳಿರುವ ವಿಡಿಯೊವನ್ನು ಸ್ಥಳೀಯರು ಸಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್‌ ಸೂಚಿಸಿರುವುದಾಗಿ ಚೀನಾದ ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.