ADVERTISEMENT

ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಡ್ರೋನ್ ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಜುಲೈ 2021, 8:46 IST
Last Updated 2 ಜುಲೈ 2021, 8:46 IST
ಸಾಂದರ್ಭಿಕ ಚಿತ್ರ (ಎಎಫ್‌ಪಿ ಸಂಗ್ರಹ)
ಸಾಂದರ್ಭಿಕ ಚಿತ್ರ (ಎಎಫ್‌ಪಿ ಸಂಗ್ರಹ)   

ಇಸ್ಲಾಮಾಬಾದ್: ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಡ್ರೋನ್ ಪತ್ತೆಯಾಗಿದೆ.

ಈ ಭದ್ರತಾ ಲೋಪಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಜಮ್ಮುವಿನಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ವಾಯುನೆಲೆ ಮೇಲೆ ಭಾನುವಾರ ಡ್ರೋನ್ ದಾಳಿ ನಡೆದಿತ್ತು. ಪಾಕಿಸ್ತಾನ ಮೂಲದ ಉಗ್ರರು ದಾಳಿ ನಡೆಸಿದ್ದಾರೆ ಎನ್ನಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.