
ಪೂರ್ವ ಪೆಸಿಫಿಕ್ ಮಹಾಸಾಗರದಲ್ಲಿ ದೋಣಿ ಮೇಲೆ ಅಮೆರಿಕ ಸೇನೆ ದಾಳಿ ನಡೆಸಿದ ದೃಶ್ಯ
ಎಎಫ್‌ಪಿ ಚಿತ್ರ
ವಾಷಿಂಗ್ಟನ್: ಪೂರ್ವ ಪೆಸಿಫಿಕ್ ಮಹಾಸಾಗರದಲ್ಲಿ ಮಾದಕವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಡಿ ದೋಣಿ ಮೇಲೆ ಅಮೆರಿಕ ಸೇನೆ ದಾಳಿ ನಡೆಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಸೆಪ್ಟೆಂಬರ್‌ನಿಂದ ಈವರೆಗೆ ಒಟ್ಟು 30 ದೋಣಿಗಳ ಮೇಲೆ ದಾಳಿ ನಡೆಸಿದ್ದು, ಕನಿಷ್ಠ 107 ಜನ ಮೃತಪಟ್ಟಿರುವುದಾಗಿ ಅಮೆರಿಕದ ‘ಸದರ್ನ್ ಕಮಾಂಡ್’ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.
ಈ ದೋಣಿ ಮೂಲಕ ಮಾದಕವಸ್ತು ಕಳ್ಳಸಾಗಣೆ ಕಾರ್ಯಾಚರಣೆ ನಡೆಸಲಾಗುತ್ತಿತ್ತು ಎಂದು ಅಮೆರಿಕ ಸೇನೆ ಸೋಮವಾರ ತಿಳಿಸಿದೆ. ಆದರೆ, ಆ ಹೇಳಿಕೆಗೆ ಪೂರಕವಾಗಿ ಯಾವುದೇ ಸಾಕ್ಷ್ಯಗಳನ್ನು ಒದಗಿಸಿಲ್ಲ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ದಾಳಿಗಳನ್ನು ಸಮರ್ಥಿಸಿಕೊಂಡಿದ್ದಾರೆ. ‘ಅಮೆರಿಕಕ್ಕೆ ಮಾದಕವಸ್ತುಗಳ ಪೂರೈಕೆ ತಡೆಯಲು ಇಂತಹ ಕಠಿಣ ಕ್ರಮಗಳು ಅನಿವಾರ್ಯವಾಗಿವೆ. ಅಲ್ಲದೆ, ಮಾದಕವಸ್ತು ಮಾಫಿಯಾ ವಿರುದ್ಧ ‘ಸಶಸ್ತ್ರ ಸಂಘರ್ಷ’ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.
ದಾಳಿಗಳ ಜೊತೆಗೆ, ಟ್ರಂಪ್ ಆಡಳಿತವು ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರ ಮೇಲೆ ಒತ್ತಡ ಹಾಕುವ ಉದ್ದೇಶದಿಂದ ಆ ಪ್ರದೇಶದಲ್ಲಿ ಮಿಲಿಟರಿ ಪಡೆಗಳನ್ನು ನಿಯೋಜಿಸಿದೆ. ಮಡುರೊ ಅವರ ಮೇಲೆ ‘ಮಾದಕವಸ್ತು ಭಯೋತ್ಪಾದನೆ’ ಆರೋಪ ಹೊರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.