ADVERTISEMENT

ಸೌದಿ ದೊರೆಗೆ ಮೋದಿ ಲಿಖಿತ ಸಂದೇಶ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2022, 11:36 IST
Last Updated 12 ಸೆಪ್ಟೆಂಬರ್ 2022, 11:36 IST

ಜೆಡ್ಡಾ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಸೌದಿ ಅರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ಭೇಟಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಲಿಖಿತ ಸಂದೇಶ ಹಸ್ತಾಂತರಿಸಿದರು. ದ್ವಿಪಕ್ಷೀಯ ಬಾಂಧವ್ಯದ ಪ್ರಗತಿಯ ಬಗ್ಗೆಯೂ ಅವರು ಮಾಹಿತಿ ನೀಡಿದರು.

ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಲು ಜೈಶಂಕರ್ ಅವರು ಮೂರು ದಿನಗಳ ಭೇಟಿಗಾಗಿ ಶನಿವಾರ ಸೌದಿ ಅರೇಬಿಯಾಕ್ಕೆ ಬಂದಿದ್ದಾರೆ. ವಿದೇಶಾಂಗ ಸಚಿವರಾಗಿ ಸೌದಿಗೆ ಇದು ಅವರ ಮೊದಲ ಭೇಟಿ.

‘ಮೊಹಮ್ಮದ್ ಬಿನ್ ಸಲ್ಮಾನ್ ಪ್ರಧಾನಿ ಮೋದಿ ಅವರ ಲಿಖಿತ ಸಂದೇಶ ಸ್ವೀಕರಿಸಿದ್ದಾರೆ’ ಎಂದು ಸೌದಿ ಅಧಿಕೃತ ಪ್ರೆಸ್ ಏಜೆನ್ಸಿ ವರದಿ ಮಾಡಿದೆ.

ADVERTISEMENT

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತು ಬಾಂಧವ್ಯ ವೃದ್ಧಿ ಅವಕಾಶಗಳ ಬಗ್ಗೆ ಸಭೆಯಲ್ಲಿ ಪರಿಶೀಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.