ADVERTISEMENT

ಜೈಶಂಕರ್– ನೆತನ್ಯಾಹು ಭೇಟಿ; ದ್ವಿಪಕ್ಷೀಯ ಒಪ್ಪಂದ ಕುರಿತು ಚರ್ಚೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 15:31 IST
Last Updated 17 ಡಿಸೆಂಬರ್ 2025, 15:31 IST
ಬೆಂಜಮಿನ್‌ ನೆತನ್ಯಾಹು
ಬೆಂಜಮಿನ್‌ ನೆತನ್ಯಾಹು   

ಜೆರುಸಲೇಮ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿಯಾಗಿ ತಂತ್ರಜ್ಞಾನ, ಆರ್ಥಿಕತೆ, ಸಂಪರ್ಕ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಉಭಯ ದೇಶಗಳ ನಡುವಿನ ಸಹಕಾರ ವೃದ್ಧಿಸುವ ಮಾರ್ಗಗಳ ಕುರಿತು ಚರ್ಚಿಸಿದರು.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ಕುರಿತು ಚರ್ಚಿಸಿದ ಅವರು ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆ ಬಲಗೊಳ್ಳುತ್ತಿರುವ ಕುರಿತು ವಿಶ್ವಾಸ ವ್ಯಕ್ತಪಡಿಸಿದರು. 

ಎರಡು ದಿನಗಳ ಭೇಟಿಗಾಗಿ ಮಂಗಳವಾರ ಇಸ್ರೇಲ್‌ಗೆ ಬಂದಿರುವ ಜೈಶಂಕರ್‌, ಇಸ್ರೇಲ್ ಅಧ್ಯಕ್ಷ ಐಸ್ಯಾಕ್ ಹೆರ್ಜೊಗ್‌ ಅವರನ್ನು ಭೇಟಿಯಾದರು. ಇದೇ ವೇಳೆ ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯೊನ್‌ ಸಾರ್‌ ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ನಿರ್ ಬರ್ಕಾತ್‌  ಅವರೊಂದಿಗೆ ಚರ್ಚಿಸಿದರು.

ADVERTISEMENT

‘ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತು ಅವರ ಅಭಿಪ್ರಾಯವನ್ನು ಗೌರವಿಸಿದ್ದೇವೆ. ನಮ್ಮ ಕಾರ್ಯತಂತ್ರದ ಪಾಲುದಾರಿಕೆ ವೃದ್ಧಿಯಾಗುವ ವಿಶ್ವಾಸವಿದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.