ವಿಶ್ವಸಂಸ್ಥೆ: ಭಯೋತ್ಪಾದನೆಯಿಂದ ಮಾನವತೆಗೆ ಆಗಿರುವ ನಷ್ಟವನ್ನು ಪ್ರತಿಪಾದಿಸುವ ಪ್ರದರ್ಶನಕ್ಕೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸೋಮವಾರ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಚಾಲನೆ ನೀಡಿದರು.
‘ದಿ ಹ್ಯೂಮನ್ ಕಾಸ್ಟ್ ಆಫ್ ಟೆರರಿಸಂ’ ಎಂಬ ಶೀರ್ಷಿಕೆಯ ಪ್ರದರ್ಶನದಲ್ಲಿ ವಿಶ್ವದ ವಿವಿಧೆಡೆ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ಪರಿಣಾಮವನ್ನು ವಿವರಿಸಲಾಗಿದೆ. ಅದನ್ನು ಹತ್ತಿಕ್ಕಲು ನಡೆಯುತ್ತಿರುವ ಯತ್ನಗಳನ್ನೂ ಬಿಂಬಿಸಲಾಗಿದೆ.
ಪಾಕಿಸ್ತಾನದ ಲಷ್ಕರ್–ಎ–ತಯಬಾ ಸಂಘಟನೆಗೆ ಸೇರಿದ ಭಯೋತ್ಪಾದಕರು 2008ರಲ್ಲಿ ಮುಂಬೈನಲ್ಲಿ ನಡೆಸಿದ ದಾಳಿಯಿಂದ ಹಿಡಿದು ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ದಾಳಿಯವರೆಗೆ ಎಲ್ಲವನ್ನೂ ಪ್ರದರ್ಶನದಲ್ಲಿ ತೋರಿಸಲಾಗಿದೆ. ಜುಲೈ 11ರವರೆಗೆ ಈ ಪ್ರದರ್ಶನ ನಡೆಯಲಿದ್ದು, ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟ ಕುರಿತು ವಿಶ್ವದ ಗಮನಸೆಳೆಯುವ ಉದ್ದೇಶವನ್ನು ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.