ADVERTISEMENT

ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಭೂಕಂಪ: 5.9ರಷ್ಟು ತೀವ್ರತೆ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜುಲೈ 2023, 2:02 IST
Last Updated 29 ಜುಲೈ 2023, 2:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ ಬಳಿ ಶನಿವಾರ ಬೆಳಗಿನ ಜಾವ 12.53ರ ಹೊತ್ತಿಗೆ ಭೂಕಂಪ ಸಂಭವಿಸಿದೆ.

ರಿಕ್ಟರ್‌ ಮಾಪಕದಲ್ಲಿ 5.9ರಷ್ಟು ತೀವ್ರತೆಯ ವರದಿಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಭೂಕಂಪದ ಕೇಂದ್ರಬಿಂದು ಪೋರ್ಟ್ ಬ್ಲೇರ್‌ನ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿದೆ ಎಂದು ಸಂಸ್ಥೆ ತಿಳಿಸಿದೆ. ಭೂಕಂಪವು  ಮೇಲ್ಮೈಯಿಂದ 69 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ತಜ್ಞರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.