ADVERTISEMENT

ತಾಲಿಬಾನ್‌ ವಶವಾದ ಅಫ್ಗಾನಿಸ್ತಾನದಲ್ಲಿ ಭೂಕಂಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಆಗಸ್ಟ್ 2021, 7:43 IST
Last Updated 19 ಆಗಸ್ಟ್ 2021, 7:43 IST
ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಚಾಮನ್‌ ನಗರದ  (ರಾಯಿಟರ್ಸ್‌ ಚಿತ್ರ)
ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಚಾಮನ್‌ ನಗರದ (ರಾಯಿಟರ್ಸ್‌ ಚಿತ್ರ)    

ನವದೆಹಲಿ: ಅಫ್ಗಾನಿಸ್ತಾನದಲ್ಲಿ ಗುರುವಾರ ಬೆಳಿಗ್ಗೆ 11.22 ರ ಸುಮಾರಿನಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.5 ರಷ್ಟು ತೀವ್ರತೆ ದಾಖಲಾಗಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪ ಮಾಪನಶಾಸ್ತ್ರ ಕೇಂದ್ರ (ಎನ್‌ಸಿಎಸ್‌) ತಿಳಿಸಿದೆ.

ಹಿಂದೂ ಕುಶ್ ಪ್ರದೇಶ ಭೂಕಂಪನ ಕೇಂದ್ರ ಬಿಂದುವಾಗಿದೆ. 92 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಎನ್‌ಸಿಎಸ್ ತನ್ನ ಪ್ರಾಥಮಿಕ ವರದಿಯಲ್ಲಿ ತಿಳಿಸಿದೆ.

ಬೆಜಾರಕ್, ಜಬಲ್ ಸರಜ್ ಮತ್ತು ಚರಿಕರ್ ಸೇರಿದಂತೆ ಹಲವು ನಗರಗಳಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿದು ಬಂದಿದೆ.

ADVERTISEMENT

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.