ADVERTISEMENT

ಫಿಲಿಫೈನ್ಸ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ

ಏಜೆನ್ಸೀಸ್
Published 25 ಡಿಸೆಂಬರ್ 2020, 1:24 IST
Last Updated 25 ಡಿಸೆಂಬರ್ 2020, 1:24 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮನಿಲಾ: ಫಿಲಿಫೈನ್ಸ್‌ನಲ್ಲಿ ಶುಕ್ರವಾರ ಬೆಳಗ್ಗೆ 5.13ರ ಸುಮಾರಿಗೆ ಪ್ರಬಲ ಭೂಕಂಪ ಸಂಭವಿಸಿದ್ದು ತಕ್ಷಣಕ್ಕೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ರಾಜಧಾನಿ ಮನಿಲಾದಲ್ಲಿ 6.3 ತೀವ್ರತೆಯ ಪ್ರಬಲ ಕಂಪನದ ಹೊಡೆತಕ್ಕೆ ಕಟ್ಟಡಗಳು ಉರುಳಿದ್ದು, ರಸ್ತೆಗಳು ಮತ್ತು ಸೇತುವೆಗಳು ಧ್ವಂಸವಾಗಿವೆ ಎಂದು ವರದಿಯಾಗಿದೆ.

ಸ್ಥಳಕ್ಕೆ ರಕ್ಷಣಾ ತಂಡಗಳು ತೆರಳಿದ್ದು ಕಟ್ಟಡದ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.