ADVERTISEMENT

ಕ್ಯಾಲಿಫೋರ್ನಿಯಾದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 7.1ರಷ್ಟು ದಾಖಲು

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 6:18 IST
Last Updated 6 ಜುಲೈ 2019, 6:18 IST
   

ವಾಷಿಂಗ್ಟನ್: ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಪ್ರಬಲ ಭೂಕಂಪವಾಗಿದ್ದು ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

ಕಂಪನ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.1ರಷ್ಟು ದಾಖಲಾಗಿದೆ. ಲಾಸ್‌ ಎಂಜಲೀಸ್‌ನಿಂದ 125 ಕಿ.ಮೀ ದೂರದಲ್ಲಿರುವಡೆತ್ ವ್ಯಾಲಿ ನ್ಯಾಷನಲ್ ಪಾರ್ಕ್‌ನಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಕೇವಲ 10 ಕಿ.ಮೀಟರ್ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಇತ್ತು ಎಂದುಅಮೆರಿಕದ ಭೂಗರ್ಭ ಸರ್ವೇಕ್ಷಣಾ ಕೇಂದ್ರ ತಿಳಿಸಿದೆ.

ಕಳೆದ 25 ವರ್ಷಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪ ಇದಾಗಿದೆ. ಹಲವು ಕಟ್ಟಡಗಳಿಗೆಹಾನಿಯಾಗಿದ್ದು ಇಲ್ಲಿಯವರೆಗೂ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ADVERTISEMENT

ಕಳೆದ ಎರಡು ದಿನಗಳಿಂದಲೂ ಈ ಭಾಗದಲ್ಲೂ ಭೂಮಿ ಕಂಪಿಸುತ್ತಿದೆ ಎಂದುಭೂಗರ್ಭ ಸರ್ವೇಕ್ಷಣಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.