ADVERTISEMENT

ಈಜಿಪ್ಟ್​​ನಲ್ಲಿ ಹಳಿ ತಪ್ಪಿದ ರೈಲು: ಇಬ್ಬರ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಮಾರ್ಚ್ 2023, 2:44 IST
Last Updated 8 ಮಾರ್ಚ್ 2023, 2:44 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕೈರೊ: ಈಜಿಪ್ಟ್‌ನಲ್ಲಿ ಪ್ರಯಾಣಿಕರ ರೈಲು ಬುಧವಾರ ಬೆಳಗ್ಗೆ ಹಳಿ ತಪ್ಪಿದ್ದು ಇಬ್ಬರು ಮೃತಪಟ್ಟಿದ್ದು, 16 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರದ ವಕ್ತಾರರು ಹೇಳಿದ್ದಾರೆ.

ಕೈರೊ ನಗರದ ಬಳಿ ಈ ಅವಘಡ ಸಂಭವಿಸಿದೆ. ಇಲ್ಲಿನ ರಾಮ್ಸೆಸ್ ನಿಲ್ದಾಣದಿಂದ ಮೆನೌಫ್ ನಗರಕ್ಕೆ ರೈಲು ತೆರಳುತ್ತಿತ್ತು. ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ.

ಘಟನೆ ಜರುಗಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಇವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಘಟನೆ ಬಗ್ಗೆ ತನಿಖೆಗೆ ಈಜಿಪ್ಟ್‌ ಸರ್ಕಾರ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.