ADVERTISEMENT

America Party: ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ ಇಲಾನ್ ಮಸ್ಕ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜುಲೈ 2025, 4:23 IST
Last Updated 6 ಜುಲೈ 2025, 4:23 IST
<div class="paragraphs"><p>ಇಲಾನ್ ಮಸ್ಕ್</p></div>

ಇಲಾನ್ ಮಸ್ಕ್

   

(ರಾಯಿಟರ್ಸ್ ಚಿತ್ರ)

ವಾಷಿಂಗ್ಟನ್: ಬಿಲಿಯನೇರ್ ಉದ್ಯಮಿ ಇಲಾನ್‌ ಮಸ್ಕ್ 'ಅಮೆರಿಕ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ್ದಾರೆ.

ADVERTISEMENT

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಭಿನ್ನಾಭಿಪ್ರಾಯದ ಬೆನ್ನಲ್ಲೇ ಅಮೆರಿಕದ ಜನರಿಗಾಗಿ ಹೊಸ ರಾಜಕೀಯ ಪಕ್ಷ ರಚಿಸುವುದಾಗಿ ಮಸ್ಕ್ ಘೋಷಿಸಿದ್ದರು.

ಈ ಕುರಿತು ತಮ್ಮದೇ ಒಡೆತದನಲ್ಲಿರುವ ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಮಾಹಿತಿ ಹಂಚಿರುವ ಮಸ್ಕ್, 'ನಿಮ್ಮ ಸ್ವಾತಂತ್ರ್ಯವನ್ನು ಹಿಂದಿರುಗಿಸಲು ಅಮೆರಿಕ ಪಕ್ಷವನ್ನು ಸ್ಥಾಪಿಸಲಾಗಿದೆ' ಎಂದು ಪ್ರಕಟಿಸಿದ್ದಾರೆ.

ಈ ಮೊದಲು ಹೊಸ ಪಕ್ಷ ಸ್ಥಾಪನೆಗೆ ಸಂಬಂಧಿಸಿದಂತೆ ಮಸ್ಕ್, ಎಕ್ಸ್ ಪೋಲ್ ಮೂಲಕ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದ್ದರು.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಅವರನ್ನು ಬೆಂಬಲಿಸಿದ್ದ ಇಲಾನ್ ಮಸ್ಕ್, ದೇಣಿಗೆಯನ್ನು ನೀಡಿದ್ದರು. ಬಳಿಕ ಎರಡನೇ ಅವಧಿಗೆ ಅಮೆರಿಕದ ಚುಕ್ಕಾಣಿ ಹಿಡಿದ ಡೊನಾಲ್ಡ್ ಟ್ರಂಪ್, ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ್ದ ಟೆಸ್ಲಾ ಮಾಲೀಕ ಇಲಾನ್ ಮಸ್ಕ್ ಅವರನ್ನು ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ (ಡಿಒಜಿಇ)ಯ ಉಸ್ತುವಾರಿಯಾಗಿ ನೇಮಕ ಮಾಡಿದ್ದರು. ಆಡಳಿತ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳುವುದರ ಜೊತೆಗೆ ಅನಗತ್ಯ ವೆಚ್ಚಗಳನ್ನು ಕಡಿತ ಮಾಡುವುದು ಈ ಇಲಾಖೆಯ ಉದ್ದೇಶವಾಗಿತ್ತು.

ಆದರೆ ಟ್ರಂಪ್ ಜತೆಗಿನ ಭಿನಾಭಿಪ್ರಾಯದಿಂದಾಗಿ ಡಿಒಜಿಇ ಮುಖ್ಯಸ್ಥ ಸ್ಥಾನವನ್ನು ಮಸ್ಕ್ ತೊರೆದಿದ್ದರು. ಇದರಿಂದಾಗಿ ಇಬ್ಬರ ನಡುವೆ ಉಂಟಾಗಿರುವ ಮನಸ್ತಾಪವು ದ್ವೇಷ ಸಾಧಿಸುವ ಮಟ್ಟಕ್ಕೆ ಬೆಳೆದಿತ್ತು. ಟ್ರಂಪ್‌ ಅವರ ತೆರಿಗೆ ಮತ್ತು ಖರ್ಚು ಮಸೂದೆಯನ್ನು ವಿರೋಧಿಸಿ ಮಸ್ಕ್‌ ಟೀಕೆ ಮಾಡಲು ಆರಂಭಿಸಿದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಇಬ್ಬರೂ ಪರಸ್ಪರ ಅರೋಪ–ಪ್ರತ್ಯಾರೋಪ ನಡೆಸಿದ್ದರು.

ತೆರಿಗೆ ಮತ್ತು ಖರ್ಚು ಮಸೂದೆ ಜಾರಿಗೊಂಡರೆ ಉದ್ಯಮಿ ಇಲಾನ್‌ ಮಸ್ಕ್‌ ಅವರು ಎಲೆಕ್ಟ್ರಿಕ್‌ ವಾಹನಗಳ ಸಬ್ಸಿಡಿಗಿಂತ ಹೆಚ್ಚಿನದನ್ನು ಕಳೆದುಕೊಳ್ಳುವರು. ಮಸ್ಕ್ ತಮ್ಮ ಅಂಗಡಿಯನ್ನು ಮುಚ್ಚಿ ದಕ್ಷಿಣ ಆಫ್ರಿಕಾಕ್ಕೆ ಅವರು ಹಿಂದಿರುಗಬೇಕಾಗಬಹುದು ಎಂದು ಟ್ರಂಪ್‌ ಎಚ್ಚರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.