ADVERTISEMENT

USA: ಡೊನಾಲ್ಡ್ ಟ್ರಂಪ್ ಆಡಳಿತದಿಂದ ಎಲಾನ್ ಮಸ್ಕ್ ನಿರ್ಗಮನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಮೇ 2025, 2:03 IST
Last Updated 29 ಮೇ 2025, 2:03 IST
<div class="paragraphs"><p>ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್</p></div>

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್

   

(ರಾಯಿಟರ್ಸ್ ಚಿತ್ರ)

ವಾಷಿಂಗ್ಟನ್: ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಘೋಷಿಸಿದ್ದಾರೆ.

ADVERTISEMENT

ಈ ಕುರಿತು ತಮ್ಮದೇ ಒಡೆತನದ ಸಾಮಾಜಿಕ ಮಾಧ್ಯಮ 'ಎಕ್ಸ್' ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

'ವಿಶೇಷ ಸರ್ಕಾರಿ ಉದ್ಯೋಗಿಯಾಗಿ ನನ್ನ ನಿಗದಿತ ಅವಧಿ ಕೊನೆಗೊಂಡಿದೆ. ಅನಗತ್ಯ ವೆಚ್ಚಗಳನ್ನು ಕಡಿತ ಮಾಡಲು ಅವಕಾಶ ನೀಡಿದ್ದಕ್ಕಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದಗಳು' ಎಂದು ತಿಳಿಸಿದ್ದಾರೆ.

'ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ (ಡಿಒಜಿಇ) ಕಾಲಕ್ರಮೇಣ ಬಲಗೊಳ್ಳಲಿದ್ದು, ಸರ್ಕಾರದ ಕಾರ್ಯವಿಧಾನ ಭಾಗವಾಗಿದೆ' ಎಂದು ಅವರು ಹೇಳಿದ್ದಾರೆ.

ತೆರಿಗೆ ಬಿಲ್‌ಗೆ ಸಂಬಂಧಿಸಿ ಉಂಟಾಗಿರುವ ಭಿನ್ನಾಭಿಪ್ರಾಯದಿಂದ ಟ್ರಂಪ್ ಆಡಳಿತವನ್ನು ತೊರೆಯಲು ಮಸ್ಕ್ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದಾಯಕ್ಕಿಂತ ಖರ್ಚು ಹೆಚ್ಚುವುದು ಡಿಒಜಿಇ ದಕ್ಷತೆಯ ಮೇಲೆ ಪರಿಣಾಮ ಬೀರಲಿದ್ದು, ದುರ್ಬಲಗೊಳಿಸಲಿದೆ ಎಂದು ಟ್ರಂಪ್ ತೀರ್ಮಾನದ ವಿರುದ್ಧ ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಎರಡನೇ ಅವಧಿಗೆ ಅಮೆರಿಕದ ಚುಕ್ಕಾಣಿ ಹಿಡಿದ ಡೊನಾಲ್ಡ್ ಟ್ರಂಪ್, ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ್ದ ಟೆಸ್ಲಾ ಮಾಲೀಕ ಎಲಾನ್ ಮಸ್ಕ್ ಅವರನ್ನು ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ (ಡಿಒಜಿಇ)ಯ ಉಸ್ತುವಾರಿಯಾಗಿ ನೇಮಿಸಿದ್ದರು.

ಆಡಳಿತ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳುವುದರ ಜೊತೆಗೆ ಅನಗತ್ಯ ವೆಚ್ಚಗಳನ್ನು ಕಡಿತ ಮಾಡುವುದು ಈ ಇಲಾಖೆಯ ಉದ್ದೇಶವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.