ADVERTISEMENT

ಕಾಶ್ಮೀರ ಸಮಸ್ಯೆ ಚರ್ಚಿಸಿ ಪರಿಹರಿಸಿಕೊಳ್ಳಿ: ಭಾರತ–ಪಾಕಿಸ್ತಾನಕ್ಕೆ ಟರ್ಕಿ ಸಲಹೆ

ಪಿಟಿಐ
Published 13 ಫೆಬ್ರುವರಿ 2025, 12:45 IST
Last Updated 13 ಫೆಬ್ರುವರಿ 2025, 12:45 IST
ಪಾಕಿಸ್ತಾನ ಪ್ರವಾಸದಲ್ಲಿರುವ ಟರ್ಕಿ ಅಧ್ಯಕ್ಷ ರಿಸಿಪ್ ತಯ್ಯಿಪ್ ಎರ್ಡೊಗನ್ ಅವರು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರನ್ನು ಭೇಟಿ ಮಾಡಿ, ಪರಸ್ಪರ ಕೈಕುಲುಕಿದರು
ಪಾಕಿಸ್ತಾನ ಪ್ರವಾಸದಲ್ಲಿರುವ ಟರ್ಕಿ ಅಧ್ಯಕ್ಷ ರಿಸಿಪ್ ತಯ್ಯಿಪ್ ಎರ್ಡೊಗನ್ ಅವರು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರನ್ನು ಭೇಟಿ ಮಾಡಿ, ಪರಸ್ಪರ ಕೈಕುಲುಕಿದರು   

ಇಸ್ಲಾಮಾಬಾದ್: ಕಾಶ್ಮೀರ ಜನರ ಒಳಿತು ಗಮನದಲ್ಲಿಟ್ಟುಕೊಂಡು, ಕಾಶ್ಮೀರ ಸಮಸ್ಯೆಯನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಪಾಕಿಸ್ತಾನ ಮತ್ತು ಭಾರತಕ್ಕೆ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಸಲಹೆ ನೀಡಿದ್ದಾರೆ. 

ಎರಡು ದಿನಗಳ ಪಾಕಿಸ್ತಾನ ಪ್ರವಾಸದಲ್ಲಿರುವ ಟರ್ಕಿ ಅಧ್ಯಕ್ಷ ಎರ್ಡೊಗನ್, ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಜೊತೆಗಿನ ಮಾತುಕತೆ ಬಳಿಕ ಕಾಶ್ಮೀರ ಸಮಸ್ಯೆ ಕುರಿತು ಪ್ರಸ್ತಾಪಿಸಿದರು. ಇದೇ ಸಂದರ್ಭದಲ್ಲಿ ಉಭಯ ದೇಶಗಳ ನಾಯಕರು 24 ಒಪ್ಪಂದಗಳಿಗೆ ಸಹಿ ಹಾಕಿದರು. ಆ ಬಳಿಕ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸಲು ಕಾರ್ಯಪ್ರವೃತ್ತರಾಗುವುದಾಗಿ ಉಭಯ ನಾಯಕರು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT