ಸಾವು
(ಪ್ರಾತಿನಿಧಿಕ ಚಿತ್ರ)
ಇಸ್ಲಾಮಾಬಾದ್ : ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಬುಧವಾರ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ನಿರಾಶ್ರಿತರ ಸಚಿವ ಮತ್ತು ಇತರ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಚಿವಾಲಯದ ಒಳಗೆ ಸ್ಫೋಟ ಸಂಭವಿಸಿದ್ದು, ನಿರಾಶ್ರಿತರ ಸಚಿವ ಖಲೀಲ್ ಹಕ್ಕಾನಿ ಹತರಾಗಿದ್ದಾರೆ. ಇವರು ತಾಲಿಬಾನ್ ಆಡಳಿತದಲ್ಲಿ ಮತ್ತೊಬ್ಬ ಪ್ರಭಾವಿ ನಾಯಕನಾಗಿರುವ ಗೃಹ ಸಚಿವ ಸಿರಾಜುದ್ದೀನ್ ಹಕ್ಕಾನಿಯವರ ಚಿಕ್ಕಪ್ಪ.
ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಸದ್ಯಕ್ಕೆ ಹೊತ್ತುಕೊಂಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.