ADVERTISEMENT

ಪಾಕಿಸ್ತಾನ: ಕರಾಚಿಯಲ್ಲಿ ಸ್ಫೋಟ, 3 ಸಾವು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 6:17 IST
Last Updated 21 ಅಕ್ಟೋಬರ್ 2020, 6:17 IST
ಸ್ಪೋಟ ಸಂಭವಿಸಿದ ಪ್ರದೇಶದ ದೃಶ್ಯ – (ಚಿತ್ರ ಕೃಪೆ–ಡಾನ್)
ಸ್ಪೋಟ ಸಂಭವಿಸಿದ ಪ್ರದೇಶದ ದೃಶ್ಯ – (ಚಿತ್ರ ಕೃಪೆ–ಡಾನ್)   

ಕರಾಚಿ: ಇಲ್ಲಿನ ಗುಲ್ಶಾನ್ ಇ ಇಕ್ಬಾಲ್ ಪ್ರದೇಶದ ಕಟ್ಟಡವೊಂದರಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ ಎಂದು ಈಧಿ ಫೌಂಡೇಶನ್ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಮತ್ತು ಮೃತದೇಹಗಳನ್ನು ಪಟೇಲ್ ಆಸ್ಪತ್ರೆಗೆ ಒಯ್ಯಲಾಗಿದೆ ಎಂದು ‘ಡಾನ್’ ಮಾಧ್ಯಮ ವರದಿ ಮಾಡಿದೆ.

ಸ್ಫೋಟಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಆದಾಗ್ಯೂ, ಗ್ಯಾಸ್ ಸಿಲಿಂಡರ್ ಸೋರಿಕೆ ಸ್ಫೋಟಕ್ಕೆ ಕಾರಣ ಇರಬಹುದು ಎಂದು ಮುಬಿನಾ ಟೌನ್ ಪೊಲೀಸರು ಶಂಕಿಸಿರುವುದಾಗಿ ವರದಿ ಉಲ್ಲೇಖಿಸಿದೆ. ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ಬಂದು ತಪಾಸಣೆ ನಡೆಸಲಿದ್ದು, ಬಳಿಕ ಸ್ಫೋಟಕ್ಕೆ ಕಾರಣ ಏನೆಂಬುದು ಖಚಿತವಾಗಲಿದೆ.

ADVERTISEMENT

ಕಟ್ಟಡದ ಎರಡನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಸಮೀಪದ ಕಟ್ಟಡಗಳ ಕಿಟಕಿಗಳು ಹಾಗೂ ವಾಹನಗಳಿಗೆ ಹಾನಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಮಂಗಳವಾರ ಕರಾಚಿಯ ಶರೀನ್ ಜಿನ್ನಾ ಕಾಲೊನಿಯ ಬಸ್‌ ಟರ್ಮಿನಲ್‌ ಪ್ರವೇಶ ದ್ವಾರದಲ್ಲಿ ಸಂಭವಿಸಿದ್ದ ಬಾಂಬ್‌ ಸ್ಫೋಟದಲ್ಲಿ ಐವರು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.