ಕ್ವಾಡ್ ಸಭೆಯಲ್ಲಿ ಭಾಗಿಯಾದ ಸಚಿವ ಎಸ್. ಜೈಶಂಕರ್
ವಾಷಿಂಗ್ಟನ್: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರ ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕದ ವಿದೇಶಾಂಗ ಸಚಿವರೊಂದಿಗೆ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ವಾಡ್ ಸಭೆಯಲ್ಲಿ ಭಾಗವಹಿಸಿದರು.
ಜತೆಗೆ ಟ್ರಂಪ್ ಆಡಳಿತದಲ್ಲಿ ಹೊಸದಾಗಿ ನೇಮಕಗೊಂಡ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕ್ ವಾಲ್ಟ್ಜ್ ಅವರೊಂದಿಗೆ ಸಭೆ ನಡೆಸಿದರು.
ಕ್ವಾಡ್ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಗುರಿಯನ್ನು ಹೊಂದಿರುವ ನಾಲ್ಕು (ಭಾರತ, ಅಮೆರಿಕ. ಜಪಾನ್, ಆಸ್ಟ್ರೇಲಿಯಾ) ದೇಶಗಳ ಗುಂಪಾಗಿದೆ.
‘ಸ್ಥಿರ ಮತ್ತು ಸಮೃದ್ಧ ಇಂಡೊ ಫೆಸಿಫಿಕ್ ರಾಷ್ಟ್ರಗಳ ನಿರ್ಮಾಣ, ಮಿತ್ರ ರಾಷ್ಟ್ರಗಳೊಂದಿಗೆ ಕೆಲಸ ಮಾಡುವ ಕುರಿತು ಚರ್ಚಿಸಲಾಯಿತು. ಕ್ವಾಡ್ ಜಾಗತಿಕ ಒಳಿತಿಗಾಗಿ ಒಂದು ಶಕ್ತಿಯಾಗಿ ಮುಂದುವರಿಯಲಿದೆ ಎನ್ನುವ ಸಂದೇಶವನ್ನು ಈ ಸಭೆ ನೀಡಲಿದೆ’ ಎಂದು ರೂಬಿಯೊ ಎನ್‌ಬಿಸಿ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.