ವಿಶ್ವಸಂಸ್ಥೆ: ‘ತೀವ್ರವಾದಿಗಳ ಗುಂಪು ಕೋವಿಡ್-19 ಲಾಕ್‌ಡೌನ್‌ನ ಲಾಭ ಪಡೆದುಕೊಳ್ಳುತ್ತಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಯುವಜನರನ್ನು ತಮ್ಮತ್ತ ಸೆಳೆದುಕೊಳ್ಳಲು ಯತ್ನಿಸುತ್ತಿವೆ’ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೊನಿಯೊ ಗುಟೆರಸ್ ಎಚ್ಚರಿಕೆ ನೀಡಿದ್ದಾರೆ.
‘ಆರೋಗ್ಯ ತುರ್ತು ಪರಿಸ್ಥಿತಿ ಉಂಟಾಗಿರುವ ಈ ಸಂದರ್ಭದಲ್ಲಿ ಯುವಜನರು ಹೆಚ್ಚಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುತ್ತಿದ್ದಾರೆ. ತೀವ್ರವಾದಿಗಳು ಇದನ್ನು ದುರ್ಬಳಕೆ ಮಾಡಿಕೊಂಡು ಹೆಚ್ಚು ದ್ವೇಷ ಬಿತ್ತುವ ಹಾಗೂ ಯುವಜನರನ್ನು ತಮ್ಮತ್ತ ಸೆಳೆದುಕೊಳ್ಳುವ ಯತ್ನ ನಡೆಸುತ್ತಿರುವುದನ್ನು ಸಹಿಸಲಾಗುವುದಿಲ್ಲ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.