ADVERTISEMENT

TikTok ಖಾತೆ ಡಿಲೀಟ್ ಮಾಡಲು ನಿರಾಕರಿಸಿದ ಮಗಳನ್ನು ಗುಂಡಿಕ್ಕಿ ಕೊಂದ ತಂದೆ!

ಪಿಟಿಐ
Published 9 ಜುಲೈ 2025, 10:17 IST
Last Updated 9 ಜುಲೈ 2025, 10:17 IST
   

ಪೆಶಾವರ: ಟಿಕ್‌ಟಾಕ್ ಖಾತೆಯನ್ನು ಅಳಿಸಲು ನಿರಾಕರಿಸಿದ ಮಗಳನ್ನು ತಂದೆ ಗುಂಡಿಕ್ಕಿ ಕೊಂದಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ರಾವಲ್ಪಿಂಡಿ ಜಿಲ್ಲೆಯ ಧೋಕ್ ಚೌದ್ರನ್ ತಖ್ತ್ ಪರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಿಕ್‌ಟಾಕ್ ಪ್ರೊಫೈಲ್ ಡಿಲೀಟ್ ಮಾಡುವಂತೆ ತಂದೆ, ಮಗಳಿಗೆ ಪದೇ ಪದೇ ಹೇಳುತ್ತಿದ್ದರು ಎಂದು ವರದಿಯಾಗಿದೆ. ಆಕೆ ತಂದೆಯ ಮಾತನ್ನು ನಿರಾಕರಿಸಿದಾಗ, ಅವರು ಗುಂಡು ಹಾರಿಸಿ ಸ್ಥಳದಲ್ಲೇ ಆಕೆಯನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರಕಾರ, ಗುಂಡಿನ ದಾಳಿಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಮನೆಯವರು ಪ್ರಯತ್ನಪಟ್ಟಿದ್ದರು. ಆದರೆ, ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದಾಗ ಕೊಲೆ ಎಂದು ಗೊತ್ತಾಗಿರುವುದಾಗಿ ಪೊಲೀಸರು ಹೇಳಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸ್ಥಳಕ್ಕೆ ತೆರಳಿ ಮಾದರಿಗಳನ್ನು ಸಂಗ್ರಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.