ADVERTISEMENT

ಪಾಕಿಸ್ತಾನದ ಮುಲ್ತಾನ್‌ನಲ್ಲಿ ಎಲ್‌ಪಿಜಿ ಟ್ಯಾಂಕರ್ ಸ್ಫೋಟ; ಕನಿಷ್ಠ ಐದು ಸಾವು

​ಪ್ರಜಾವಾಣಿ ವಾರ್ತೆ
Published 27 ಜನವರಿ 2025, 7:37 IST
Last Updated 27 ಜನವರಿ 2025, 7:37 IST
<div class="paragraphs"><p>ಸ್ಫೋಟ</p></div>

ಸ್ಫೋಟ

   

ಕರಾಚಿ: ಪಾಕಿಸ್ತಾನದ ಮುಲ್ತಾನ್‌ ನಗರದಲ್ಲಿ ಎಲ್‌ಪಿಜಿ ಟ್ಯಾಂಕರ್‌ ಟ್ರಕ್‌ ಸ್ಫೋಟಗೊಂಡಿದ್ದು ಕನಿಷ್ಠ ಐವರು ಮೃತಪಟ್ಟು, 31 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪೂರ್ವ ಪಂಜಾಬ್ ಪ್ರಾಂತ್ಯದ ಮುಲ್ತಾನ್‌ನ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಸ್ಫೋಟ ಸಂಭವಿಸಿದೆ. ಇದರಿಂದಾಗಿ, ಹತ್ತಿರದ ಮಳಿಗೆಗಳು, ಮನೆಗಳಿಗೆ ಭಾರಿ ಹಾನಿಯಾಗಿದೆ. ಬೆಂಕಿ ಹಾಗೂ ಮನೆಗಳ ಮೇಲ್ಛಾವಣಿ ಕುಸಿದಿರುವುದರಿಂದ ಸಾವು–ನೋವು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಟ್ರಕ್‌ನಲ್ಲಿ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿರಬಹುದು ಎಂದು ಅಂದಾಜಿಸಿದ್ದೇವೆ. ತನಿಖೆಯ ನಂತರವಷ್ಟೇ ನಿಖರ ಕಾರಣ ಏನೆಂಬುದು ಗೊತ್ತಾಗಲಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.