ಸೋಲ್: ನಿರ್ಮಾಣ ಹಂತದ ಕಟ್ಟಡದಲ್ಲಿಬುಧವಾರ ಸಂಭವಿಸಿದ ಸ್ಫೋಟದಲ್ಲಿ38 ಮಂದಿಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ.ಇಚಿಯಾನ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ನಿರ್ಮಾಣ ವೇಳೆ ಈ ಅವಘಡ ಸಂಭವಿಸಿದೆ. ಒಟ್ಟು 78 ಕಾರ್ಮಿಕರು ಇದ್ದರು ಎನ್ನಲಾಗಿದೆ. ಅವಶೇಷಗಡಿ ಕಾರ್ಮಿಕರು ಸಿಲುಕಿರುವ ಸಂಭವವಿದೆ ಎನ್ನಲಾಗಿದೆ.
ಕೆಲವು ಕಾರ್ಮಿಕರು ನೆಲ ಮಹಡಿಯಲ್ಲಿ ಯುರೇಥೇನ್ ರಾಸಾಯನಿಕ ಬಳಸಿ ಕೆಲಸ ಮಾಡುತ್ತಿದ್ದಾಗ ಈ ಸ್ಫೋಟ ಉಂಟಾಗಿದೆ ಎಂದು ಶಂಕಿಸಲಾಗಿದೆ.ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ ಉಂಟಾಯಿತು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.