ADVERTISEMENT

ಇರಾನ್‌: ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಅವಘಡ, 32 ಮಂದಿ ದುರ್ಮರಣ

ರಾಯಿಟರ್ಸ್‌
Published 3 ನವೆಂಬರ್ 2023, 12:45 IST
Last Updated 3 ನವೆಂಬರ್ 2023, 12:45 IST
<div class="paragraphs"><p>ಬೆಂಕಿ ಅವಘಡ–ಪ್ರಾತಿನಿಧಿಕ ಚಿತ್ರ</p></div>

ಬೆಂಕಿ ಅವಘಡ–ಪ್ರಾತಿನಿಧಿಕ ಚಿತ್ರ

   

ದೋಹಾ: ಉತ್ತರ ಇರಾನ್‌ನಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಘಟನೆಯಲ್ಲಿ 32 ಮಂದಿ ಸಾವಿಗೀಡಾಗಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ಗಿಲಾನ್‌ನ ಕ್ಯಾಸ್ಪಿಯನ್ ಸಮುದ್ರ ಪ್ರಾಂತ್ಯದ ಲಾಂಗರುಡ್‌ನಲ್ಲಿರುವ ಮಾದಕ ದ್ರವ್ಯ ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ಘಟನೆ ಸಂಬಂಧ ಪುನರ್ವಸತಿ ಕೇಂದ್ರದ ಮ್ಯಾನೇಜರ್ ಸೇರಿದಂತೆ ಇತರರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇರಾನ್ ವಿಶ್ವದಲ್ಲೇ ಅತ್ಯಂತ ತೀವ್ರವಾದ ವ್ಯಸನ ಸಮಸ್ಯೆಗಳನ್ನು ಎದುರಿಸುತ್ತಿರುವ ರಾಷ್ಟ್ರವಾಗಿದೆ ಎಂದು ಯುನೈಟೆಡ್ ನೇಷನ್ಸ್ ಆಫೀಸ್ ಆಫ್ ಡ್ರಗ್ಸ್ ಆ್ಯಂಡ್ ಕ್ರೈಮ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.