ಅಬುಜಾ (ನೈಜೀರಿಯಾ): ವಾಯವ್ಯ ನೈಜೀರಿಯಾದ ಇಸ್ಲಾಮಿಕ್ ಶಾಲೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 17 ಮಕ್ಕಳು ಮೃತಪಟ್ಟಿದ್ದಾರೆ ಎಂದು ತುರ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
‘ಜಮ್‌ಫೆರಾ ರಾಜ್ಯದ ಕೌರಾ ನಮೋದಾ ಜಿಲ್ಲೆಯಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಾಗ ಶಾಲೆಯಲ್ಲಿ ಸುಮಾರು 100 ಮಕ್ಕಳಿದ್ದರು. 17 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.
‘ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಗುರುವಾರ ತನಿಖೆ ಆರಂಭಿಸಿದ್ದು, ಅವಘಡಕ್ಕೆ ಕಾರಣವೇನೆಂದು ನಿಖರವಾಗಿ ತಿಳಿದುಬಂದಿಲ್ಲ. ಪ್ರಾಥಮಿಕ ತನಿಖೆ ಪ್ರಕಾರ, ಶಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಗ್ರಹಿಸಲಾಗಿದ್ದ, ಬಾಯಿಯ ಸ್ವಚ್ಛತೆಗೆ ಬಳಸುವ ‘ಕಾರಾ’ ಕಡ್ಡಿಗಳಿಂದ ಬೆಂಕಿ ಆವರಿಸಿರಬಹುದು’ ಎಂದು ಸಂಸ್ಥೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.