ADVERTISEMENT

ರಷ್ಯಾ: ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ

ಏಜೆನ್ಸೀಸ್
Published 3 ಜೂನ್ 2022, 11:05 IST
Last Updated 3 ಜೂನ್ 2022, 11:05 IST
ಮಾಸ್ಕೊದ ವಾಣಿಜ್ಯ ಕಟ್ಟಡದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಹೆಲಿಕಾಪ್ಟರ್‌ ಬಳಸಿ ನಂದಿಸುವ ಕಾರ್ಯಾಚರಣೆ ಶುಕ್ರವಾರ ನಡೆಯಿತು  –ಎಎಫ್‌ಪಿ ಚಿತ್ರ
ಮಾಸ್ಕೊದ ವಾಣಿಜ್ಯ ಕಟ್ಟಡದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಹೆಲಿಕಾಪ್ಟರ್‌ ಬಳಸಿ ನಂದಿಸುವ ಕಾರ್ಯಾಚರಣೆ ಶುಕ್ರವಾರ ನಡೆಯಿತು  –ಎಎಫ್‌ಪಿ ಚಿತ್ರ   

ಮಾಸ್ಕೊ: ರಷ್ಯಾ ರಾಜಧಾನಿ ಮಾಸ್ಕೊದ ವಾಣಿಜ್ಯ ಕಟ್ಟಡವೊಂದರಲ್ಲಿ ಶುಕ್ರವಾರ ಬೆಂಕಿ ಅವಘಡ ಸಂಭವಿಸಿದ್ದು, 125 ಮಂದಿಯನ್ನು ರಕ್ಷಿಸಲಾಗಿದೆ. ಕಟ್ಟಡದ ಒಳಗೆ ಇನ್ನೂ ಹಲವರು ಸಿಲುಕಿರುವ ಶಂಕೆ ಇದೆ. ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ನಂದಿಸಲು ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸಲು 180 ಸಿಬ್ಬಂದಿ, 12 ಅಗ್ನಿ ಶಾಮಕ ವಾಹನಗಳು ಮತ್ತು ಮೂರು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ತುರ್ತು ಸೇವೆಗಳ ಸಚಿವ ಅಲೆಕ್ಸಾಂಡರ್ ಕುರೆಂಕೋವ್‌ ಅವರು ಘಟನಾ ಸ್ಥಳಕ್ಕೆ ಭೆಟಿ ನೀಡಿ, ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು.

ಅವಘಡಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಶಾರ್ಟ್‌ ಸರ್ಕೀಟ್‌ನಿಂದಾಗಿ ಸಂಭವಿಸಿರಬಹುದು ಎಂಬ ಮೂಲಗಳ ಮಾಹಿತಿಯನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.