
ಪ್ರಜಾವಾಣಿ ವಾರ್ತೆ
ಸ್ಫೋಟ
(ಐಸ್ಟೋಕ್ ಚಿತ್ರ)
ಮೆಕ್ಸಿಕೊ ನಗರ: ಮೆಕ್ಸಿಕೊದ ಹರ್ಮೊಸಿಲ್ಲೊ ಎಂಬ ನಗರದ ಸೂಪರ್ ಮಾರ್ಕೆಟ್‌ವೊಂದರಲ್ಲಿ ಶನಿವಾರ ಸ್ಫೋಟ ಸಂಭವಿಸಿ 23 ಮಂದಿ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಸೂಪರ್ ಮಾರ್ಕೆಟ್‌ನ ಕೆಟ್ಟಿದ್ದ ವಿದ್ಯುತ್ ಟಾರ್ನ್ಸ್‌ಫಾರ್ಮರ್‌ನಿಂದಲೇ ಸ್ಫೋಟ ಸಂಭವಿಸಿರಬಹುದು ಎನ್ನಲಾಗುತ್ತಿದೆ.
‘ಘಟನೆಯು ಆಕಸ್ಮಿಕವಾಗಿ ಸಂಭವಿಸಿದೆ. ಮೃತರಲ್ಲಿ ಕೆಲವರು ಪುಟ್ಟ ಮಕ್ಕಳೂ ಇದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನ ಮಂದಿ ವಿಷಕಾರಿ ಅನಿಕ ಸೇವಿಸಿದ್ದರು. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ’ ಎಂದು ಸೊನಾರೊ ರಾಜ್ಯದ ಗವರ್ನರ್ ಆಲ್ಫೊಜೊ ಡುರಾಜೊ ಮಾಹಿತಿ ನೀಡಿದರು.
‘ಶನಿವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಸ್ಫೋಟ ಸಂಭವಿಸಿದೆ’ ಎಂದು ಸ್ಥಳೀಯ ಪತ್ರಿಕೆಯೊಂದು ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.