ADVERTISEMENT

ರಷ್ಯಾ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಒಬ್ಬ ಸೋಂಕಿತ ಸಾವು

ಏಜೆನ್ಸೀಸ್
Published 10 ಮೇ 2020, 2:30 IST
Last Updated 10 ಮೇ 2020, 2:30 IST
ಅಗ್ನಿ ಅವಘಡ ಸಂಭವಿಸಿದ ಆಸ್ಪತ್ರೆಯ ಹೊರಭಾಗ –ಎಎಫ್‌ಪಿ ಚಿತ್ರ
ಅಗ್ನಿ ಅವಘಡ ಸಂಭವಿಸಿದ ಆಸ್ಪತ್ರೆಯ ಹೊರಭಾಗ –ಎಎಫ್‌ಪಿ ಚಿತ್ರ   

ಮಾಸ್ಕೊ: ರಷ್ಯಾ ರಾಜಧಾನಿಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯೊಂದರಲ್ಲಿ ಶನಿವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿ ಒಬ್ಬರು ಮೃತಪಟ್ಟಿದ್ದಾರೆ. ಘಟನೆ ವೇಳೆ ಆಸ್ಪತ್ರೆಯಲ್ಲಿ 200 ಮಂದಿ ಇದ್ದರು ಎನ್ನಲಾಗಿದೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವಾರ್ಡ್‌ನಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ತಕ್ಷಣಕ್ಕೆ ತಿಳಿದುಬಂದಿಲ್ಲ. ಆಸ್ಪತ್ರೆಯಲ್ಲಿದ್ದವರನ್ನು ಸ್ಥಳಾಂತರಿಸಲಾಗಿದೆ. ಬೆಂಕಿಯನ್ನು ನಂದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆಸ್ಪತ್ರೆಯಿಂದ ಸ್ಥಳಾಂತರಿಸಿದ ಸೋಂಕಿತರನ್ನು ಇತರ ಆಸ್ಪತ್ರೆಗಳಿಗೆ ದಾಖಲಿಸಲಾಗುತ್ತಿದೆ. ಅಲ್ಲಿದ್ದ ಒಟ್ಟು ಸೋಂಕಿತರಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದವರು ಎಷ್ಟು ಮಂದಿ ಎಂಬುದು ಇನ್ನಷ್ಟೇ ತಿಳಿಯಬೇಕಿದೆ ಎಂದು ಮಾಸ್ಕೊ ಮೇಯರ್ ಸೆರ್ಗೆಯ್ ಸೊಬಯಾನಿನ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.