ADVERTISEMENT

ಮಂಕಿಪಾಕ್ಸ್‌: ಬ್ರೆಜಿಲ್‌ನಲ್ಲಿ ಮೊದಲ ಸಾವು, ವಿಶ್ವದಾದ್ಯಂತ ಸಾವಿನ ಸಂಖ್ಯೆ 6ಕ್ಕೆ

ರಾಯಿಟರ್ಸ್
Published 30 ಜುಲೈ 2022, 1:16 IST
Last Updated 30 ಜುಲೈ 2022, 1:16 IST
ಮಂಕಿಪಾಕ್ಸ್‌ (ಸಾಂದರ್ಭಿಕ ಚಿತ್ರ)
ಮಂಕಿಪಾಕ್ಸ್‌ (ಸಾಂದರ್ಭಿಕ ಚಿತ್ರ)   

ಸಾವೋ ಪಾಲೊ (ಬ್ರೆಜಿಲ್‌): ಬ್ರೆಜಿಲ್‌ನಲ್ಲಿ ಮಂಕಿಪಾಕ್ಸ್‌ ವೈರಾಣು ಸೋಂಕಿತ ವ್ಯಕ್ತಿ ಮೃತಪಟ್ಟ ಮೊದಲ ಪ್ರಕರಣ ಶುಕ್ರವಾರ ವರದಿಯಾಗಿದೆ.

ಕ್ಯಾನ್ಸರ್‌ ಮತ್ತು ಪ್ರತಿರಕ್ಷಣೆಯ ಕ್ಷೀಣತೆಯಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರು, ಮಂಕಿಪಾಕ್ಸ್‌ ರೋಗ ಲಕ್ಷಣಗಳು ಕಾಣಿಸಿಕೊಂಡು ಮೃತಪಟ್ಟಿರುವುದಾಗಿ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ಖಚಿತಪಡಿಸಿದೆ. ಈ ಪ್ರಕರಣದಿಂದ ವಿಶ್ವದಾದ್ಯಂತ ಮಂಕಿಪಾಕ್ಸ್‌ ರೋಗದಿಂದ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಮಂಕಿಪಾಕ್ಸ್‌ ಸೋಂಕು ಹರಡುವಿಕೆ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ. ಸೋಂಕಿಗೆ ತುತ್ತಾದರೂ ಸಾವಿನ ಪ್ರಮಾಣ ತುಂಬಾ ಕಡಿಮೆ ಇದೆ ಎಂದು ಬ್ರೆಜಿಲ್‌ನ ಆರೋಗ್ಯ ಕಾರ್ಯದರ್ಶಿ ಫ್ಯಾಬಿಯೊ ಬ್ಯಾಚೆರೆಟ್ಟಿ ಹೇಳಿದ್ದಾರೆ.

ADVERTISEMENT

ಬ್ರೆಜಿಲ್‌ನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮಂಕಿಪಾಕ್ಸ್ 78 ದೇಶಗಳಿಗೆ ವ್ಯಾಪಿಸಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆಯು 'ಜಾಗತಿಕ ಆರೋಗ್ಯ ತುರ್ತುಸ್ಥಿತಿ' ಎಂದು ಘೋಷಿಸಿದೆ. ಜಾಗತಿಕವಾಗಿ 18,000ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ಈ ವರೆಗೆ ಆರು ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.