ವಾಷಿಂಗ್ಟನ್: ಮಂಗಳ ಗ್ರಹದಲ್ಲಿ ಮಹಿಳೆಯೇ ಮೊದಲು ಕಾಲಿಡುವ ಸಾಧ್ಯತೆ ಇದೆ ಎಂದು ನಾಸಾ ತಿಳಿಸಿದೆ.
ಮಹಿಳೆಯ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿರುವ ನಾಸಾ ಆಡಳಿತಾಧಿಕಾರಿ ಜಿಮ್ ಬ್ರಿಡೆನ್‌ಸ್ಟೀನ್, ಅಮೆರಿಕದ ಬಾಹ್ಯಾಕಾಶ ಸಂಸ್ಥೆಯ ಯೋಜನೆಗಳಲ್ಲಿ ಮಹಿಳೆಯರೇಮುಂಚೂಣಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
‘ಮಂಗಳ ಗ್ರಹಕ್ಕೆ ತೆರಳುವ ಮೊದಲ ವ್ಯಕ್ತಿಯು ಮಹಿಳೆಯೇ ಆಗಿದ್ದಾರೆ’ ಎಂದು ಸಂದರ್ಶನವೊಂದರಲ್ಲಿ ಜಿಮ್ ಇತ್ತೀಚೆಗೆ ತಿಳಿಸಿದ್ದಾರೆ.
'ಈ ತಿಂಗಳ ಅಂತ್ಯಕ್ಕೆ ಮಹಿಳೆಯರ ತಂಡ ಬಾಹ್ಯಾಕಾಶಕ್ಕೆ ತೆರಳಲಿದ್ದಾರೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.