ADVERTISEMENT

ಶಸ್ತ್ರಾಸ್ತ್ರ ನಿಯಂತ್ರಣ : ಜುಲೈಗೆ ರಷ್ಯಾ–ಅಮೆರಿಕ ನಡುವೆ ಮೊದಲ ಸುತ್ತಿನ ಮಾತುಕತೆ

ಆರ್‌ಐಎ ಸುದ್ದಿ ಸಂಸ್ಥೆ ವರದಿ

ರಾಯಿಟರ್ಸ್
Published 24 ಜೂನ್ 2021, 8:20 IST
Last Updated 24 ಜೂನ್ 2021, 8:20 IST
ಜೋ ಬೈಡನ್
ಜೋ ಬೈಡನ್   

ಮಾಸ್ಕೊ: ಶಸ್ತ್ರಾಸ್ತ್ರ ನಿಯಂತ್ರಣ ಮತ್ತು ಕಾರ್ಯತಂತ್ರ ಕುರಿತು ರಷ್ಯಾ ಮತ್ತು ಅಮೆರಿಕ ನಡುವೆ ಮೊದಲ ಸುತ್ತಿನ ಮಾತುಕತೆ ಜುಲೈನಲ್ಲಿ ನಡೆಯುವ ಸಾಧ್ಯತೆ ಇದೆ.

ಈ ಕುರಿತು ರಷ್ಯಾದ ಉಪ ವಿದೇಶಾಂಗ ಖಾತೆಯ ಸಚಿವರು ನೀಡಿರುವ ಹೇಳಿಕೆ ಉಲ್ಲೇಖಿಸಿ ಆರ್‌ಐಎ ಸುದ್ದಿ ಸಂಸ್ಥೆ ಗುರುವಾರ ವರದಿ ಮಾಡಿದೆ.

ಇದೇ ತಿಂಗಳು ಜಿನೀವಾದಲ್ಲಿ ನಡೆದ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು, ಭವಿಷ್ಯದ ಶಸ್ತ್ರಾಸ್ತ್ರ ನಿಯಂತ್ರಣ ಮತ್ತು ಅಪಾಯ ತಗ್ಗಿಸಲು ಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಿದ್ದಾರೆ. ಈ ಸಂಬಂಧ ತಳಮಟ್ಟದ ಕಾರ್ಯಕ್ರಮ ರೂಪಿಸಲು ಸಮಗ್ರ ದ್ವಿಪಕ್ಷೀಯ ಕಾರ್ಯತಂತ್ರ ಕೈಗೊಳ್ಳಲು ಒಪ್ಪಿದ್ದಾರೆ ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.