ADVERTISEMENT

ಇಂಡೋನೇಷ್ಯಾದಲ್ಲಿ ಪ್ರವಾಹ: 16 ಮಂದಿ ಸಾವು

ಏಜೆನ್ಸೀಸ್
Published 15 ಜುಲೈ 2020, 8:32 IST
Last Updated 15 ಜುಲೈ 2020, 8:32 IST
ಇಂಡೋನೇಷ್ಯಾ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಅಧಿಕಾರಿಗಳು
ಇಂಡೋನೇಷ್ಯಾ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಅಧಿಕಾರಿಗಳು   

ಜಕಾರ್ತ: ಇಂಡೋನೇಷ್ಯಾದ ದಕ್ಷಿಣ ಸುಲವೇಸಿ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರವಾಹದಲ್ಲಿ 16 ಜನರು ಸಾವನ್ನಪ್ಪಿದ್ದು,23 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಕಾಣೆಯಾಗಿರುವ 23 ಮಂದಿಗಾಗಿ ಶೋಧ ಕಾರ್ಯಚರಣೆ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಹಲವೆಡೆ ಭೂ ಕುಸಿತ ಸಂಭವಿಸಿದೆ ಎಂದು ಅಲ್ಲಿನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ ವಕ್ತಾರರು ತಿಳಿಸಿದರು.

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೂರು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದಾಗಿ ಆ ಪ್ರಾಂತ್ಯದಲ್ಲಿ ಪ್ರವಾಹ ಎದುರಾಗಿದೆ ಎಂದು ಉತ್ತರ ಲುವು ಜಿಲ್ಲೆಯ ಅಧಿಕಾರಿಯೊಬ್ಬರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.