ADVERTISEMENT

ಚೀನಾದ ಹುನಾನ್ ಪ್ರಾಂತ್ಯದಲ್ಲಿ ಪ್ರವಾಹ: 10 ಮಂದಿ ಸಾವು

ಏಜೆನ್ಸೀಸ್
Published 9 ಜೂನ್ 2022, 14:50 IST
Last Updated 9 ಜೂನ್ 2022, 14:50 IST
ದಕ್ಷಿಣ ಚೀನಾದ ಗುವಾಂಗ್‌ಕ್ಸಿ ಪ್ರಾಂತ್ಯದಲ್ಲಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಯಲ್ಲಿ ನಿಂತ ನೀರನ್ನು ಜನರೇ ತೆರವು ಮಾಡುತ್ತಿರುವುದು -ಎಎಫ್‌ಪಿ ಚಿತ್ರ
ದಕ್ಷಿಣ ಚೀನಾದ ಗುವಾಂಗ್‌ಕ್ಸಿ ಪ್ರಾಂತ್ಯದಲ್ಲಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಯಲ್ಲಿ ನಿಂತ ನೀರನ್ನು ಜನರೇ ತೆರವು ಮಾಡುತ್ತಿರುವುದು -ಎಎಫ್‌ಪಿ ಚಿತ್ರ   

ಬೀಜಿಂಗ್: ಚೀನಾದ ಹುನಾನ್ ಪ್ರಾಂತ್ಯದಲ್ಲಿ ಉಂಟಾದ ಪ್ರವಾಹದಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಮೂರು ಮಂದಿ ನಾಪತ್ತೆಯಾಗಿದ್ದಾರೆ. ಅಲ್ಲದೆ, ಪ್ರವಾಹದಿಂದ ಉಂಟಾದ ಭೂಕುಸಿತದಲ್ಲಿ ದಕ್ಷಿಣದ ಗುವಾಂಗ್‌ಕ್ಸಿ ಪ್ರಾಂತ್ಯದ ಗ್ರಾಮವೊಂದರ ಕೆಲ ಭಾಗವು ಕೊಚ್ಚಿ ಹೋಗಿದೆ ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮ ವರದಿ ಮಾಡಿದೆ.

ಜೂನ್ ತಿಂಗಳ ಆರಂಭದಿಂದಲೂ ಹುನಾನ್ ಪ್ರಾಂತ್ಯದಲ್ಲಿ ಚಂಡಮಾರುತ ಅಪ್ಪಳಿಸಿದ್ದು, ದಾಖಲೆ ಪ್ರಮಾಣದ ಮಳೆಯಾಗಿದೆ. ಇದರಿಂದ ಗ್ರಾಮೀಣ ಪ್ರದೇಶ ಸೇರಿದಂತೆ 18 ಲಕ್ಷ ಮಂದಿ ಸಮಸ್ಯೆಗೆ ಸಿಲುಕಿದ್ದಾರೆ. 2700ಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿದ್ದು, 2.86 ಲಕ್ಷಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಅಲ್ಲದೆ,ಜಿಯಾಂಗ್‌ಕ್ಸಿ, ಫುಜಿಯಾನ್, ಗ್ವಾಂಗ್‌ಡಾಂಗ್, ಹೆನಾನ್, ಸಿಚುವಾನ್, ಚೊಂಗ್‌ಕ್ವಿಂಗ್ ಮತ್ತು ಯುನ್ನಾನ್ ಪ್ರದೇಶಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ವರದಿಯಾಗಿದೆ.

ಚೀನಾದ ಕೇಂದ್ರೀಯ ಮತ್ತು ದಕ್ಷಿಣ ಭಾಗಗಳಲ್ಲಿ ಬೇಸಿಗೆ ತಿಂಗಳುಗಳಲ್ಲಿ ಅತಿಹೆಚ್ಚು ಮಳೆ ಸುರಿಯುತ್ತದೆ. 1998ರಲ್ಲಿ ಚೀನಾದಲ್ಲಿ ಸಂಭವಿಸಿದ್ದ ಪ್ರವಾಹದಲ್ಲಿ 2000ಕ್ಕೂ ಹೆಚ್ಚು ಮಂದಿ ಮೃತಪಟ್ಟು, 30 ಲಕ್ಷಕ್ಕೂ ಹೆಚ್ಚು ಮನೆಗಳು ಹಾನಿಗೊಂಡಿದ್ದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.